ಜಿಲ್ಲೆ

ಶಾಸಕ ಎಸ್.ವಿ.ರಾಮಚಂದ್ರ ವಿರುದ್ಧ ಮಾಜಿ ಶಾಸಕರ ಅನಗತ್ಯ ಟೀಕೆ: ಜಗಳೂರಿನಲ್ಲಿ ಬಿಜೆಪಿ ಮುಖಂಡರ ಆರೋಪ

Chitradurga

ಜಗಳೂರು: ಕ್ಷೇತ್ರದ ಪ್ರಗತಿಗೆ ಶ್ರಮಿಸುತ್ತಿರುವ ಶಾಸಕ ಎಸ್.ವಿ.ರಾಮಚಂದ್ರ ವಿರುದ್ಧ ಮಾಜಿ ಶಾಸಕ ರಾಜೇಶ್ ಅವರು ಸುಳ್ಳು ಆರೋಪ ಮಾಡುತ್ತಿದ್ದು, ಇದು ಮುಂದುವರಿದರೆ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಬಿಜೆಪಿ ಎಸ್ಟಿ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಬಿದರಕೆರೆ ರವಿ ಎಚ್ಚರಿಸಿದರು.

ಪಟ್ಟಣದ ಪತ್ರಿಕಾ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮಾಜಿ ಶಾಸಕರು ತಮ್ಮ ಅವಧಿ ಮಾಡಿದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಹೇಳಿಕೊಳ್ಳಲಿ. ಅದರ ಬದಲು ಪದೇ ಪದೆ ಶಾಸಕರ ಬಗ್ಗೆ ಟೀಕೆ ಮಾಡುವುದು ಸರಿಯಲ್ಲ ಎಂದರು.

ಪಕ್ಷದ ತಾಲೂಕಾಧ್ಯಕ್ಷ ಎಚ್.ಸಿ.ಮಹೇಶ್, ಜಿಲ್ಲಾ ಉಪಾಧ್ಯಕ್ಷ ಡಿ.ವಿ.ನಾಗಪ್ಪ, ಪಪಂ ಅಧ್ಯಕ್ಷ ಎಸ್.ಸಿದ್ದಪ್ಪ, ಜಿಪಂ ಮಾಜಿ ಸದಸ್ಯರಾದ ಎಸ್.ಕೆ.ಮಂಜುನಾಥ್, ಎಚ್.ನಾಗರಾಜ್, ಮುಖಂಡರಾದ ಶಿವಕುಮಾರ್ ಸ್ವಾಮಿ, ಶಿವಣ್ಣ, ಬಿಸ್ತುವಳ್ಳಿ ಬಾಬು ಇದ್ದರು.