ಜಿಲ್ಲೆ

ಜೈನ ಅಭಿವೃದ್ಧಿ ನಿಗಮ ಪ್ರಸ್ತಾವನೆ ಪರಿಶೀಲನೆ

ರಾಘವೇಂದ್ರಗೌಡ ಭೀ ಪಾಟೀಲ್

ಚಿಕ್ಕೋಡಿ: ಜೈನ ಅಭಿವೃದ್ಧಿ ನಿಗಮ ಸ್ಥಾಪಿಸಲು ಉದ್ದೇಶಿಸಲಾಗಿದ್ದು ಪ್ರಸ್ತಾವನೆ ಪರಿಶೀಲನೆಯಲ್ಲಿದೆ ಎಂದು ಸಚಿವ ಜಮೀರ್ ಅಹ್ಮದ್ ಹೇಳಿದರು.

ಬೆಂಗಳೂರಿನಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಶಾಸಕಿ ಶಶಿಕಲಾ ಜೊಲ್ಲೆ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಜೈನ ಅಭಿವೃದ್ಧಿ ನಿಗಮ ಸ್ಥಾಪಿಸಲು ಉದ್ದೇಶಿಸಲಾಗಿದ್ದು ಪ್ರಸ್ತಾವನೆ ಪರಿಶೀಲನೆಯಲ್ಲಿದೆ ಎಂದು ಹೇಳಿದ್ದಾರೆ.

ಮುಸ್ಲಿಂ, ಜೈನ, ಕ್ರಿಶ್ಚಿಯನ್ ಹಾಗೂ ಇನ್ನೂ ಹಲವು ಅಲ್ಪಸಂಖ್ಯಾತರಿಗೆ ಒಂದೇ ಒಂದು ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವಿದ್ದು, ಇದರಿಂದ ಎಲ್ಲರಿಗೂ ಸರ್ಕಾರದ ಸೌಲಭ್ಯಗಳು ದೊರಕುವುದು ಕಷ್ಟ ಸಾಧ್ಯವಾಗಿರುವುದು ಸರ್ಕಾರದ ಗಮನಕ್ಕೆ ಬಂದಿದೆಯೇ, ಬಂದಿದ್ದಲ್ಲಿ ಸರ್ಕಾರ ಕೈಗೊಂಡ ಕ್ರಮಗಳೇನು ಎಂದು ಶಾಸಕಿ ಶಶಿಕಲಾ ಜೊಲ್ಲೆ ಪ್ರಶ್ನೆಗೆ ಉತ್ತರಿಸಿದ ಸಚಿವ ಜಮೀರ್ ಅಹ್ಮದ್, ಅಲ್ಪಸಂಖ್ಯಾತ ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗಾಗಿ ಕರ್ನಾಟಕ ಕ್ರಿಶ್ಚಿಯನ್ ಅಭಿವೃದ್ಧಿ ನಿಗಮ ಸ್ಥಾಪಿಸಲು ಸರ್ಕಾರದ ಆಡಳಿತಾತ್ಮಕ ಅನುಮೋದನೆ ನೀಡಲಾಗಿದ್ದು, ನೋಂದಣಿ ಪ್ರಕ್ರಿಯೆ ಚಾಲ್ತಿಯಲ್ಲಿರುತ್ತದೆ ಎಂದು ತಿಳಿಸಿದ್ದಾರೆ.