ಕುಶಾಲನಗರ:
ಕುಶಾಲನಗರ ತಾಲೂಕು ವ್ಯಾಪ್ತಿಯ ಜಲಜೀವನ್ ಮಿಷನ್ ಕುಡಿಯುವ ನೀರಿನ ಸರಬರಾಜು ಯೋಜನೆಗೆ ಸಂಬAಧಿಸಿದAತೆ ಪೈಪ್ ಲೈನ್ ಅಳವಡಿಕೆ, ಟ್ಯಾಂಕ್ ನಿರ್ಮಾಣ, ಕೊಳವೆ ಬಾವಿಯಿಂದ ನೀರು ಎತ್ತಲು ವಿದ್ಯುತ್ ಸೌಲಭ್ಯ ಸೇರಿದಂತೆ ಇತರೆ ಕಾಮಗಾರಿಗಳನ್ನು ಸದ್ಯದಲ್ಲಿಯೇ ಪೂರ್ಣಗೊಳಿಸಲಾಗುವುದು ಎಂದು ತಾಲೂಕು ಗ್ರಾಮಾಂತರ ಕುಡಿಯುವ ನೀರು ಸರಬರಾಜು ಇಲಾಖೆಯ ಕಾರ್ಯಪಾಲಕ ಅಭಿಯಂತರ ವೀರೇಂದ್ರ ಕುಮಾರ್ ತಿಳಿಸಿದ್ದಾರೆ. ಕುಶಾಲನಗರ ತಾಲೂಕು ವ್ಯಾಪ್ತಿಯ ಅನೇಕ ಗ್ರಾಮಗಳಲ್ಲಿ ಬಾಕಿ ಉಳಿದ ಕಾಮಗಾರಿಯನ್ನು ಶುಕ್ರವಾರ ವೀಕ್ಷಣೆ ಮಾಡಿ ಬೇಸಿಗೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಅತಿ ಶೀಘ್ರದಲ್ಲಿ ಪೂರ್ಣಗೊಳಿಸಲು ಗುತ್ತಿಗೆದಾರರಿಗೆ ಸೂಚನೆ ನೀಡಿದರು.
ಗ್ರಾಮಾಂತರ ಪ್ರದೇಶದ ಜಲಜೀವನ್ ಮಿಷನ್ ಕುಡಿಯುವ ನೀರಿನ ಸರಬರಾಜು ಮಾಡುವ ಯೋಜನೆ ಇದೀಗ ಕಾಮಗಾರಿಗಳನ್ನು ಕೈಗೊಳ್ಳುವ ಮೂಲಕ ಚುರುಕುಗೊಂಡಿದೆ. ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಮುಖೇನ ಕಳೆದ ಮೂರು ವರ್ಷಗಳಿಂದ ಗ್ರಾಮಾಂತರ ಪ್ರದೇಶಗಳಿಗೆ ಕುಡಿಯುವ ನೀರನ್ನು ಒದಗಿಸುವ ಮಹತ್ವಾಕಾಂಕ್ಷೆಯ ಯೋಜನೆಯು ಇದ್ದಾಗಿದೆ. ಇದರ ಅನ್ವಯ ತಾಲೂಕು ವ್ಯಾಪ್ತಿಯ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಅಲ್ಲಿನ ಆಡಳಿತ ಮಂಡಳಿಯ ಸಹಕಾರದೊಂದಿಗೆ ಗ್ರಾಮದ ಎಲ್ಲಾ ಕುಟುಂಬಗಳಿಗೆ ಸಮರ್ಪಕವಾಗಿ ಕುಡಿಯುವ ನೀರು ಒದಗಿಸುವ ಕೆಲಸ ಮಾಡುತ್ತಿದೆ.
ತಾಲೂಕು ವ್ಯಾಪ್ತಿಯಲ್ಲಿ ಇಲಾಖೆಯ ಆದೇಶದಂತೆ ಕಾಮಗಾರಿ ಕ್ರಿಯಾ ಯೋಜನೆಗೆ ಅನುಗುಣವಾಗಿ ಕಾಮಗಾರಿಯನ್ನು ಕೈಗೊಳ್ಳುವ ಮೂಲಕ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಮನೆ ಮನೆಗೆ ಕುಡಿಯುವ ನೀರಿನ ಸರಬರಾಜು ಮಾಡುವ ಪೈಪ್ ಲೈನ್ ವ್ಯವಸ್ಥೆ, ಮತ್ತು ಅದಕ್ಕೆ ಸಂಬAಧಿಸಿದ ದೊಡ್ಡ ಪ್ರಮಾಣದ ನೀರು ಸಂಗ್ರಹ ಟ್ಯಾಂಕ್ ನಿರ್ಮಾಣ ಕಾರ್ಯ ಪೂರ್ಣಗೊಂಡು ಈಗಾಗಲೇ ಕೊಳವೆ ಬಾವಿಯಿಂದ ನೀರನ್ನು ಸರಬರಾಜು ಮಾಡಲಾಗುತ್ತದೆ. ಮುಂದಿನ ದಿನಗಳಲ್ಲಿ ಎಲ್ಲಾ ವಾರ್ಡ್ ಗಳಿಗೆ ಸಮರ್ಪಕವಾಗಿ ಕುಡಿಯುವ ನೀರನ್ನು ಒದಗಿಸುವ ಕಾರ್ಯ ನಡೆಯಲಿದೆ.
ಗ್ರಾಮಾಂತರ ಕುಡಿಯುವ ನೀರು ಸರಬರಾಜು ಇಲಾಖೆ ಇನ್ನೂ ಬಾಕಿ ಇರುವ ಜಲಜೀವನ್ ಮಿಷನ್ ಕುಡಿಯುವ ನೀರಿನ ಯೋಜನೆಯ ಅನುಷ್ಠಾನದ ಗ್ರಾಮಗಳಿಗೆ ಕುಡಿಯುವ ನೀರಿನ ವ್ಯವಸ್ಥೆಯ ಕಾರ್ಯ ವನ್ನು ಚುರುಕುಗೊಳಿಸುವಂತೆ ಅನೇಕ ಗ್ರಾಮ ಸಭೆಗಳಲ್ಲಿ ಚರ್ಚೆಗಳು ನಡೆದಿದ್ದವು. ಅದರಂತೆ ಗ್ರಾಮೀಣ ಕುಡಿಯುವ ನೀರಿನ ಸರಬರಾಜು ಇಲಾಖೆಯ ಅಧಿಕಾರಿ ವರ್ಗದವರ ಸೂಚನೆಯ ಮುಖೇನ ಬಾಕಿ ಉಳಿದಿರುವ ಕಾಮಗಾರಿಗಳನ್ನು ಪೂರ್ಣಗೊಳಿಸುವ ಉದ್ದೇಶದಿಂದ ಇಲಾಖೆಯ ನಿಯಮಾನುಸಾರ ಟೆಂಡರ್ ಪ್ರಕ್ರಿಯೆಯ ಅಡಿಯಲ್ಲಿ ಕಾಮಗಾರಿಗಳು ಚುರುಕುಗೊಂಡಿವೆ ಎಂದು ಮಾಹಿತಿ ನೀಡಿದರು.