ಜಿಲ್ಲೆ

ಜನಪದ ಹಾಡಿನ ಸ್ಪರ್ಧೆ

Dharwada - Basavaraj Idli

ಹುಬ್ಬಳ್ಳಿ: ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು ರಾಜ್ಯ ಲೇಖಕಿಯರ ಸಮ್ಮೇಳನ ಅಂಗವಾಗಿ ಜು. 27ರಂದು ಬೆಳಗ್ಗೆ 9ಕ್ಕೆ ನಗರದ ಮೂರುಸಾವಿರ ಮಠದ ಮೂಜಗಂ ಸಭಾಂಗಣದಲ್ಲಿ "ಜನಪದ ಪಂಚಮಿ ಹಾಡುಗಳ' ಸ್ಪರ್ಧೆ ಏರ್ಪಡಿಸಲಾಗಿದೆ.

ಸ್ಪರ್ಧೆಯಲ್ಲಿ ಕನಿಷ್ಟ ಇಬ್ಬರು ಗರಿಷ್ಟ ಐದು ಜನ ಅರ್ಹ ಮಹಿಳೆಯರು ಮಾತ್ರ ಪಾಲ್ಗೊಳ್ಳಲು ಅವಕಾಶ ಮಾಡಿಕೊಡಲಾಗಿದೆ. ವಿಜೇತರಿಗೆ ನಗದು ಬಹುಮಾನ, ಪಾಲ್ಗೊಂಡ ಎಲ್ಲರಿಗೂ ಪ್ರಮಾಣಪತ್ರ ನೀಡಲಾಗುವುದು. ಆಸಕ್ತರು ಹೆಸರು ನೋಂದಾಯಿಸುವಂತೆ ಚುಸಾಪ ಪ್ರಸಾರಾಂಗ ನಿರ್ದೇಶಕ ಚನ್ನಬಸಪ್ಪ ಧಾರವಾಡಶೆಟ್ರು ಪ್ರಕಟಣೆಯಲ್ಲಿ ಕೋರಿದ್ದಾರೆ.