ಜಿಲ್ಲೆ

ಜನಪದ ನೃತ್ಯ ಸ್ಪರ್ಧೆ ಉದ್ಘಾಟನೆ

ಸುನಿಲ್ ಪೊನ್ನೇಟಿ

ಮಡಿಕೇರಿ:

'ಇಂಗ್ಲೀಷ್' ಒಂದು ಭಾಷೆಯಾಗಿ ಪ್ರಾಥಮಿಕ ಹಂತದಿAದಲೇ ಮಕ್ಕಳಿಗೆ ಕಲಿಸುವುದರ ಜತೆಯಲ್ಲಿ, ಅತ್ಯಂತ ಸಂಪದ್ಭರಿತವಾದ ಕನ್ನಡ ಭಾಷೆಯತ್ತ ಅವರಲ್ಲಿ ಆಸಕ್ತಿಯನ್ನು ಮೂಡಿಸುವ ಮೂಲಕ ಕನ್ನಡ ಭಾಷಾ ಸಂಸ್ಕೃತಿಯನ್ನು ಸಂರಕ್ಷಿಸುವ ಕಾರ್ಯ ನಡೆಯಬೇಕಾಗಿದೆ ಎಂದು ಮಡಿಕೇರಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ದೊಡ್ಡೇಗೌಡ ಹೇಳಿದರು. ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗ ಮತ್ತು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಶನಿವಾರ ಇಲ್ಲಿನ ಲಯನ್ಸ್ ಸಭಾಂಗಣದಲ್ಲಿ 69ನೇ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಜನಪದ ನೃತ್ಯ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದರು.

ಒಂದು ಭಾಷೆಯಾಗಿ ಇಂಗ್ಲೀಷ್ ಕಲಿಸುವ ಹಂತದಲ್ಲೇ ಕನ್ನಡ ಭಾಷೆಯ ಆಳವಾದ ಜ್ಞಾನ ಹೊಂದಿರುವ ಶಿಕ್ಷಕ ವರ್ಗದ ಮೂಲಕ ಕನ್ನಡ ಭಾಷಾ ಸಂಸ್ಕೃತಿಯತ್ತ ಮಕ್ಕಳಲ್ಲಿ ಒಲವು ಮೂಡಿಸುವ ಪ್ರಯತ್ನ ಅತ್ಯವಶ್ಯವಾಗಿ ನಡೆಯಬೇಕು. ಕನ್ನಡದ ಮೌಲ್ಯ ಮತ್ತು ಬದುಕು ಅತ್ಯಂತ ದೊಡ್ಡದಾಗಿದ್ದು, ಇದನ್ನರಿತು ಕನ್ನಡಿಗರಾದ ನಾವೆಲ್ಲ ಒಂದೆನ್ನುವ ಭಾವವನ್ನು ಮನದಲ್ಲಿ ತುಂಬಿಕೊAಡು ಒಟ್ಟಾಗಿ ಕನ್ನಡದ ಕಂಪನ್ನು ಪಸರಿಸಬೇಕು. ಎರಡು ಸಾವಿರ ವರ್ಷಗಳ ಶ್ರೀಮಂತ ಪರಂಪರೆಯ ಕನ್ನಡಕ್ಕೆ ಶಾಸ್ತ್ರೀಯವಾದ ಸ್ಥಾನ ಮಾನಗಳು ದೊರಕಿದೆಯಾದರು, ಕನ್ನಡವನ್ನು ತಮ್ಮದೆಂದು ಅಪ್ಯಾಯಮಾನವಾಗಿ ಅಪ್ಪಿಕೊಳ್ಳುವ ಮನಸ್ಥಿತಿಗಳು ಕಾಣುತ್ತಿಲ್ಲ. ಈ ಹಿನ್ನೆಲೆಯಲ್ಲಿ ಕನ್ನಡ ಪರಂಪರೆಯನ್ನು ಮುಂದುವರೆಸುವ ಮಹತ್ವದ ಜವಾಬ್ದಾರಿ ಹೊಂದಿರುವ ಮಕ್ಕಳಲ್ಲಿ ಕನ್ನಡ ಭಾಷಾ ಸಂಸ್ಕೃತಿಯ ಒಲವನ್ನು ಮೂಡಿಸುವ, ಕನ್ನಡದ ಓದನ್ನು ಪ್ರೋತ್ಸಾಹಿಸುವ ಪ್ರಯತ್ನ ಅವಶ್ಯವಾಗಿ ನಡೆಯಬೇಕು ಎಂದರು.

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ಮಾತನಾಡಿ, ಕನ್ನಡಿಗರಾದ ನಾವೆಲ್ಲ ನಮ್ಮ ಬದುಕಿನಲ್ಲಿ ನಾಲ್ಕು ಮಂದಿಗೆ ಕನ್ನಡವನ್ನು ಕಲಿಸಿದಲ್ಲಿ ಕನ್ನಡದ ಉದ್ಧಾರ ಸಾಧ್ಯವಾಗುತ್ತದೆ. ಪ್ರಸ್ತುತ ಬದುಕಿಗಾಗಿ ಕನ್ನಡ ನೆಲದಲ್ಲಿ ನೆಲೆ ನಿಂತ ಮಂದಿಯೊAದಿಗೆ ಕನ್ನಡದಲ್ಲಿ ವ್ಯವಹರಿಸಬೇಕಾದ ನಾವು, ಅವರ ಭಾಷೆಯಲ್ಲೆ ಮಾತನಾಡುವ ಪರಿಸ್ಥಿತಿಯನ್ನು ನೋಡುತ್ತಿದ್ದೇವೆ. ಇದನ್ನು ಮೀರಿ ನಮ್ಮೆಲ್ಲ ವ್ಯವಹಾರಗಳಲ್ಲಿ ಕನ್ನಡದ ಬಳಕೆಗೆ ಒತ್ತು ನೀಡುವಂತಾಗಬೇಕೆAದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್ ಮಾತನಾಡಿ, ಕನ್ನಡ ಭಾಷಾ ಸಂಸ್ಕೃತಿ ಅತ್ಯಂತ ಶಕ್ತಿಯುತವಾದದ್ದು. ಇದರ ಬೆನ್ನೆಲುಬೇ ಸಾಹಿತ್ಯ. ಇಂದು ಕನ್ನಡ ಸಂಸ್ಕೃತಿಯ ಬೆಳವಣಿಗೆಗೆ ಅಗತ್ಯ ಸ್ಪಂದನ ದೊರಕುತ್ತಿಲ್ಲವೆನ್ನುವ ಭಾವನೆ ಮೂಡುತ್ತಿದೆ. ಇಂತಹ ಸಂದಿಗ್ಧ ಕಾಲಘಟ್ಟದಲ್ಲಿ ಕನ್ನಡ ಭಾಷಾ ಸಂಸ್ಕೃತಿಯತ್ತ ಪ್ರತಿಯೊಬ್ಬರೂ ಹೃದಯವಂತಿಕೆ ಮೆರೆದು, ಈ ನೆಲದ ಸಂಸ್ಕೃತಿಯ ಬೆಳವಣಿಗೆಗೆ ಮುಂದಾಗಬೇಕೆAದು ಹೇಳಿದರು.

ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್ ಮಾತನಾಡಿದರು. ಸರ್ವೋದಯ ಸಮಿತಿ ಅಧ್ಯಕ್ಷ ಅಂಬೆಕಲ್ಲು ಕುಶಾಲಪ್ಪ, ಬಳಗದ ಅಧ್ಯಕ್ಷ ಲೋಕನಾಥ್ ಅಮೆಚೂರ್, ನವೀನ್ ಅಂಬೇಕಲ್, ರೇವತಿ ರಮೇಶ್, ಭಾರತಿ ರಮೇಶ್, ಕಡ್ಲೇರ ತುಳಸಿ, ಜಲಜಾ ಶೇಖರ್, ಟಿ.ಜಿ.ಪ್ರೇಮಕುಮಾರ್, ಜೆ.ಸಿ. ಶೇಖರ್, ನಾಗರಾಜ್, ಕೆ.ವಿ.ಉಮೇಶ್, ವಿ.ಎ. ಮಂಜುನಾಥ್ ಮತ್ತಿತರರು ಇದ್ದರು.

ವೇದಿಕೆ ಕಾರ್ಯಕ್ರಮ ಬಳಿಕ ನಡೆದ ಪ್ರೌಢಶಾಲಾ ವಿದ್ಯಾರ್ಥಿಗಳ ಜನಪದ ನೃತ್ಯ ಸ್ಪರ್ಧೆ ಅತ್ಯಾಕರ್ಷಕವಾಗಿ ಮೂಡಿ ಬಂದಿತು. ಜಾನಪದ ನೃತ್ಯ ಸ್ಪರ್ಧೆಯಲ್ಲಿ ಮಡಿಕೇರಿಯ ಸಂತ ಮೈಕಲರ ಪ್ರೌಢಶಾಲೆ ಪ್ರಥಮ, ಕೊಡಗು ವಿದ್ಯಾಲಯ ದ್ವಿತೀಯ, ಜನರಲ್ ತಿಮ್ಮಯ್ಯ ಪ್ರೌಢಶಾಲೆಯ ವಿದ್ಯಾರ್ಥಿಗಳು ತೃತೀಯ ಸ್ಥಾನ ಪಡೆದರು. ಬ್ಲಾಸಂ ಪ್ರೌಢಶಾಲೆ, ಸಂತ ಜೋಸೆಫರ ಪ್ರೌಢಶಾಲೆ ಹಾಗೂ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ಸಮಾಧಾನಕರ ಬಹುಮಾವ ಪಡೆದರು.

ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಪರೀಕ್ಷೆ ಬರೆದು ಕೊಡಗು ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿರುವ ಮಾದಾಪುರ ಶ್ರೀಮತಿ ಡಿ.ಚೆನ್ನಮ್ಮ ಪದವಿ ಪೂರ್ವ ಕಾಲೇಜಿನ ಅದವಿಯ ಯು ಗೆ ಕೊಡಗು ಜಿಲ್ಲಾ ಲೇಖಕರ ಮತ್ತು ಕಲಾವಿದರ ಬಳಗ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಟಿ.ಪಿ.ರಮೇಶ್ ದತ್ತಿ ನಿಧಿ ಪ್ರಶಸ್ತಿ ಪ್ರದಾನ ಮಾಡಲಾಯಿತು.