ಜಿಲ್ಲೆ

ಜನರ ಸಮಸ್ಯೆಗಳಿಗೆ ಮಾನೆ ಸ್ಪಂದನೆ

ಮಂಜುನಾಥ ಗದಗಿನ

ಹಾನಗಲ್ಲ: ಇಲ್ಲಿನ ಪ್ರವಾಸಿ ಮಂದಿರದಲ್ಲಿ ಶಾಸಕ ಶ್ರೀನಿವಾಸ ಮಾನೆ ಜನತಾ ದರ್ಶನ ಮೂಲಕ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು.

ತಾಲೂಕಿನ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ನೂರಾರು ಸಾರ್ವಜನಿಕರು ತಮ್ಮ ಸಮಸ್ಯೆ, ಮೂಲ ಸೌಲಭ್ಯಗಳ ಕೊರತೆ, ರಸ್ತೆ, ನೀರು, ವಿದ್ಯುತ್ ಸೇರಿದಂತೆ ಹತ್ತಾರು ಅಹವಾಲು ಸಲ್ಲಿಸಿದರು.

ಪ್ರತಿಯೊಂದು ಅಹವಾಲನ್ನು ಸಮಾಧಾನದಿಂದ ಆಲಿಸಿ ತಕ್ಷಣವೇ ಸಂಬಂಧಿಸಿದ ಅಧಿಕಾರಿಗಳಿಗೆ ಕರೆ ಮಾಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು. ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ, ಪರಿಹರಿಸುವುದು ನನ್ನ ಮೊದಲ ಆದ್ಯತೆ. ಜನರ ಮಧ್ಯೆ ಇರುವುದರಿಂದ ಅವರ ದೂರು, ದುಮ್ಮಾನಗಳನ್ನು ಆಲಿಸಲು ಅನುಕೂಲವಾಗಲಿದೆ. ಈ ನಿಟ್ಟಿನಲ್ಲಿ ವಾರದಲ್ಲಿ ಒಂದು ದಿನ ಕಡ್ಡಾಯವಾಗಿ ಸಾರ್ವಜನಿಕರ ಭೇಟಿಗೆ ಲಭ್ಯನಿದ್ದು, ಸಮಸ್ಯೆ ಪರಿಹರಿಸಲು ಕಾಳಜಿ ವಹಿಸುವೆ ಎಂದರು.