ಜಿಲ್ಲೆ

ಜನತಾ ದರ್ಶನ: ಅಹವಾಲು ಸಲ್ಲಿಸಲು ಅವಕಾಶ

ಆದರ್ಶ್. ಎಂ.ಕೆ.

ಮಡಿಕೇರಿ: ಜಿಲ್ಲಾ ಮಟ್ಟದಲ್ಲಿ ಸಾರ್ವಜನಿಕರ ಅಹವಾಲುಗಳಿಗೆ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಪ್ರತಿ ಜಿಲ್ಲೆಯಲ್ಲಿಯೂ ಪ್ರತಿ ತಿಂಗಳು ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲು ಮುಖ್ಯಮಂತ್ರಿಗಳು ಸೂಚನೆ ನೀಡಿದ ಹಿನ್ನೆಲೆ ಸೆ.೨೫ ರಂದು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಪ್ರಭಾರ ಜಿಲ್ಲಾಧಿಕಾರಿ ವರ್ಣಿತ್ ನೇಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಸೆ.೨೧ ಮತ್ತು ೨೨ ರಂದು ಬೆಳಗ್ಗೆ ೧೦ ರಿಂದ ಸಂಜೆ ೪ ಗಂಟೆವರೆಗೆ ಸಾರ್ವಜನಿಕರು ಅವರ ಲಿಖಿತ ಅಹವಾಲುಗಳನ್ನು ಅಗತ್ಯ ದಾಖಲೆಗಳ ಸಹಿತ ಜಿಲ್ಲಾಡಳಿತ ಭವನದ ನೆಲಮಹಡಿಯಲ್ಲಿರುವ ಸ್ಪಂದನ ಕೇಂದ್ರದಲ್ಲಿ ತೆರೆದಿರುವ ಜನತಾ ದರ್ಶನ ಕೋಶ/ವಿಭಾಗದಲ್ಲಿ ಮನವಿಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಈ ದಿನಗಳಂದು ಸ್ವೀಕೃತವಾದ ಮನವಿಗಳನ್ನು ಕ್ರೋಡೀಕರಿಸಿ ಆಧ್ಯತೆ ಮೇರೆಗೆ ಸೆ.೨೫ ರಂದು ಪರಿಶೀಲನೆಗೆ ತೆಗೆದುಕೊಳ್ಳಲಾಗುವುದು. ಸಾರ್ವಜನಿಕರು ಸೆ.೨೫ ರಂದು ಸಹ ಅಹವಾಲು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಸಾರ್ವಜನಿಕರು ಈ ಕಾರ್ಯಕ್ರಮವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಪ್ರಭಾರ ಜಿಲ್ಲಾಧಿಕಾರಿ ವರ್ಣಿತ್ ನೇಗಿ ಮನವಿ ಮಾಡಿದ್ದಾರೆ.