ಗದಗ: ಮುಖ್ಯಮಂತ್ರಿಗಳ ಆಶಯದಂತೆ ಪ್ರತಿ ತಿಂಗಳು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಜನತಾದರ್ಶನ ಆಯೋಜಿಸುವಂತೆ ಸೂಚನೆ ನೀಡಿದ್ದು, ಅದರಂತೆ, ಮೊದಲ ಜಿಲ್ಲಾ ಮಟ್ಟದ ಜನತಾದರ್ಶನ ಕಾರ್ಯಕ್ರಮ ಸೆಪ್ಟೆಂಬರ 30 ರಂದು ಬೆಳಗ್ಗೆ 10 ಗಂಟೆಯಿಂದ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಕೆ.ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಆಯೋಜಿಸಲಾಗುವುದು, ಈ ಕುರಿತು ಅಧಿಕಾರಿಗಳು ಅಗತ್ಯ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಅವರು ಸೂಚನೆ ನೀಡಿದರು.
ಜಿಲ್ಲಾ ಮಟ್ಟದ ಜನತಾದರ್ಶನ ಕಾರ್ಯಕ್ರಮ ಆಯೋಜನೆ ಕುರಿತಂತೆ ಜಿಲ್ಲಾಡಳಿತ ಭವನದಲ್ಲಿನ ಅಡಿಟೋರಿಯಂನಲ್ಲಿ ಬುಧವಾರ ಏರ್ಪಡಿಸಲಾದ ಪೂರ್ವಭಾವಿ ಸಭೆ ಹಾಗೂ ಸಾರ್ವಜನಿಕರಿಂದ ಅರ್ಜಿ ಸ್ವೀಕರಿಸುವ ಕುರಿತಂತೆ ನಡೆದ ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಾರ್ವಜನಿಕರು ತಮ್ಮ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಜಿಲ್ಲಾ ಮಟ್ಟದ ವಿವಿಧ ಇಲಾಖೆ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಲು, ಸ್ಥಳೀಯವಾಗಿಯೇ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ, ಅವುಗಳಿಗೆ ಕಾಲಮಿತಿಯಲ್ಲಿ ಪರಿಹಾರ ಒದಗಿಸುವಂತೆ ಮಾಡಲು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಪ್ರತಿ ಮಾಹೆ ಜನತಾದರ್ಶನ ಏರ್ಪಡಿಸುವಂತೆ ಹಾಗೂ ಪ್ರತಿ ಹದಿನೈದು ದಿನಗಳಿಗೊಮ್ಮೆ ಜಿಲ್ಲಾಧಿಕಾರಿಗಳು ತಾಲ್ಲೂಕು ಮಟ್ಟದಲ್ಲಿ ಕಾರ್ಯಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ. ಅದರನ್ವಯ, ಜಿಲ್ಲೆಯಲ್ಲಿ ಪ್ರಸಕ್ತ ಸರ್ಕಾರದ ಮೊದಲ ಜಿಲ್ಲಾ ಮಟ್ಟದ ಜನತಾ ದರ್ಶನ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಕೆ.ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗುತ್ತಿದೆ.
ಸಾರ್ವಜನಿಕರಿಂದ ಸ್ವೀಕೃತವಾಗುವ ಅಹವಾಲುಗಳನ್ನು ಸ್ಕ್ಯಾನ್ ಮಾಡಿ ಸಾರ್ವಜನಿಕರ ಕುಂದುಕೊರತೆಗಳ ನಿವಾರಣಾ ವ್ಯವಸ್ಥೆ (ಐಪಿಜಿಆರ್‍ಎಸ್) ಪೆÇೀರ್ಟಲ್‍ನಲ್ಲಿ ಅಪೆÇ್ಲೀಡ್ ಮಾಡಿದ ಬಳಿಕ ನಿಗದಿತ ಕಾಲಮಿತಿಯಲ್ಲಿ ಅವುಗಳನ್ನು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ವಿಲೇವಾರಿ ಮಾಡಬೇಕಾಗುತ್ತದೆ ಆದ್ದರಿಂದ ಪ್ರತಿಯೊಂದು ಅರ್ಜಿ ವಿಲೇವಾರಿಗೆ ತ್ವರಿತ ಕ್ರಮವನ್ನು ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು. ಎಲ್ಲ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದು, ತಮ್ಮ ಇಲಾಖೆಗೆ ಸಂಬಂಧಿಸಿದಂತೆ ಸಾರ್ವಜನಿಕರ ಅಹವಾಲುಗಳನ್ನು ಸ್ಥಳದಲ್ಲಿಯೇ ಪರಿಹರಿಸಲು ಕ್ರಮ ಕೈಗೊಳ್ಳಲಿದ್ದಾರೆ. ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ ಅವುಗಳ ವಿಲೇವಾರಿಗೆ ಸಮರ್ಪಕ ಕ್ರಮ ವಹಿಸಬೇಕು ಎಂದು ನಿರ್ದೇಶನ ನೀಡಿದರು. ವಿವಿಧ ಮಾಸಾಶನಗಳಿಗೆ ಅರ್ಜಿ ಸಲ್ಲಿಸುವವರಲ್ಲಿ, ಯೋಜನೆ ಮಂಜೂರು ಮಾಡಲು ಅರ್ಹರಿದ್ದಲ್ಲಿ, ಸ್ಥಳದಲ್ಲಿಯೇ ಮಂಜೂರಾತಿ ನೀಡಿ, ಇದೇ ಸಂದರ್ಭದಲ್ಲಿಯೇ ಫಲಾನುಭವಿಗೆ ಮಂಜೂರಾತಿ ಪತ್ರ ವಿತರಣೆ ಮಾಡಲು ಕ್ರಮ ವಹಿಸಬೇಕು. ಮುಖ್ಯಮಂತ್ರಿಗಳ ನಿರ್ದೇಶನದಂತೆ ಜನತಾದರ್ಶನ ಹಮ್ಮಿಕೊಳ್ಳಲಾಗಿರುತ್ತದೆ. ಆದ್ದರಿಂದ ಪ್ರತಿಯೊಂದು ಅರ್ಜಿಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.
ಅಹವಾಲು ಸಲ್ಲಿಸುವ ಆಗಮಿಸುವ ಸಾರ್ವಜನಿಕರಿಗೆ ಸಹಾಯವಾಗುವಂತೆ ತಾಲೂಕುವಾರು ಅರ್ಜಿ ಸಲ್ಲಿಸಲು ಪ್ರತ್ಯೇಕ ಕೌಂಟರಗಳನ್ನು ತೆರೆದು ವ್ಯವಸ್ಥಿತವಾಗಿ ಅರ್ಜಿಗಳನ್ನು ಸ್ವೀಕರಿಸಿ ಅರ್ಜಿದಾರರಿಗೆ ಸ್ವೀಕೃತಿಯನ್ನು ನೀಡಬೇಕು. ಈ ಕುರಿತು ನೇಮಿಸಲಾದ ಮೇಲ್ವಿಚಾರಕರು ನುರಿತ ಸಿಬ್ಬಂದಿಗಳನ್ನು ನಿಯೋಜಿಸಿ ತ್ವರಿತವಾಗಿ ಅರ್ಜಿಗಳನ್ನು ನೋಂದಾಯಿಸುವ ಮೂಲಕ ಯಾವುದೇ ಗೊಂದಲಗಳಿಗೆ ಅವಕಾಶ ನೀಡದಂತೆ ಕಾರ್ಯನಿರ್ವಹಿಸಲು ತಿಳಿಸಿದರು.
ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮವನ್ನು ಯಶಸ್ವಿಯಾಗಿ ಜರುಗಿಸಲು ತಾಲೂಕುವಾರು ಹಿರಿಯ ಅಧಿಕಾರಿಗಳನ್ನು ಮೇಲ್ವಿಚಾರಕರನ್ನಾಗಿ ನೇಮಿಸಿ ಅವರುಗಳಿಗೆ ಕಾರ್ಯಗಳನ್ನು ಹಂಚಿಕೆ ಮಾಡಲಾಗಿದೆ. ಸಂಬಂಧಿಸಿದ ಅಧಿಕಾರಿಗಳು ತಮ್ಮ ಕಾರ್ಯಗಳನ್ನು ಸಮರ್ಪಕವಾಗಿ ನಿರ್ವಹಿಸುವದರ ಮೂಲಕ ಸದರಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು. ಪೆÇಲೀಸ್ ಇಲಾಖೆಯವರು ಅಗತ್ಯ ಮುಂಜಾಗ್ರತೆ ವಹಿಸಬೇಕು, ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರಿಗೆ ಅಗತ್ಯ ಮೂಲಭೂತ ಸೌಲಭ್ಯ ಒದಗಿಸಬೇಕು, ಈ ಕುರಿತು ಸಂಬಂಧಿಸಿದ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಅವರು ನಿರ್ದೇಶನ ನೀಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ, ಡಿವೈಎಸಪಿ ಸಂಕದ, ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ, ಪಂ.ರಾಜ್ ಇಂಜಿನಿಯರಿಂಗ್ ವಿಭಾಗದ ಕಾರ್ಯಪಾಲಕ ಅಭಿಯಂತರ ಎಸ್.ಆರ್.ಗೌಡರ, ಜಿ.ಪಂ. ಮುಖ್ಯ ಯೋಜನಾಧಿಕಾರಿ ಕಂಬಾಳಿಮಠ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪ್ರಶಾಂತ ವರಗಪ್ಪನವರ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಾರುತಿ ಬ್ಯಾಕೋಡ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಸಿಲ್ದಾರರು ಹಾಜರಿದ್ದರು.