ಕಾರವಾರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆಯಂತೆ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್ 25 ರಂದು ನಗರದ ಪೊಲೀಸ್ ಕಲ್ಯಾಣ ಮಂಟಪದಲ್ಲಿ ಬೆಳಗ್ಗೆ 11.30 ಕ್ಕೆ ಜನತಾ ದರ್ಶನ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ತಿಳಿಸಿದರು.
ಈ ಸಂಬಂಧ ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪೂರ್ವಭಾವಿ ಸಭೆ ನಡೆಸಿದರು.
ಇನ್ನು ಪ್ರತಿ ತಿಂಗಳು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಹಾಗೂ ಪ್ರತಿ 15 ದಿನಕ್ಕೊಮ್ಮೆ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಜನತಾ ದರ್ಶನ ಆಯೋಜಿಸಲಾಗುವುದು ಎಂದರು.
ಸಾರ್ವಜನಿಕರಿಗೆ ಊಟ, ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಇಲಾಖೆಗಳು ತಮ್ಮಲ್ಲಿ ಬಾಕಿ ಇರುವ ಮನವಿ, ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಬೇಕು.
ಮಾಡಲು ಸಾಧ್ಯವಾಗದ ಅರ್ಜಿಗಳಿಗೆ ಸೂಕ್ತ ಹಿಂಬರಹ ನೀಡಬೇಕು ಎಂದರು. ಎಲ್ಲ ಇಲಾಖೆಗಳು ಈ ಸಂಬಂಧ ಮಾಹಿತಿ ನೀಡಿ ಅರ್ಜಿ ಸ್ವೀಕರಿಸಬೇಕು ಮತ್ತು ಸ್ಥಳದಲ್ಲೂ ಅರ್ಜಿ ಕೌಂಟರ್ ತೆರೆಯಬೇಕು ಎಂದರು. ಜಿಪಂ ಸಿಇಒ ಈಶ್ವರ ಕುಮಾರ ಕಾಂದೂ ಇದ್ದರು.