ಮಂಡ್ಯ: ಕೇಂದ್ರ ಹಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ಜು.5ರಂದು ಬೆಳಗ್ಗೆ 10ಗಂಟೆಗೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಜನತಾದರ್ಶನ ಆಯೋಜಿಸಲಾಗಿದೆ.
ಮಂಡ್ಯ ಲೋಕಸಭಾ ಕ್ಷೇತ್ರದ ಸಾರ್ವಜನಿಕರು ತಮ್ಮ ಅಹವಾಲು ಹಾಗೂ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಬಹುದು. ಈ ಜನತಾದರ್ಶನವನ್ನು ಸದುಪಯೋಗಪಡಿಸಿಕೊಳ್ಳುವಂತೆ ಜೆಡಿಎಸ್ ಜಿಲ್ಲಾಧ್ಯಕ್ಷ ಡಿ.ರಮೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.