ಜಿಲ್ಲೆ

ಬೇಡಿಕೆ ಈಡೇರಿಕೆಗೆ ಮಹಿಳೆಯರ ಆಗ್ರಹ

ವಿಜಯಪುರ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಗರದ ಅಂಚೆ ಕಚೇರಿ ಮುಂದೆ ನೂರಾರು ಮಹಿಳೆಯರು ಶುಕ್ರವಾರ ಪ್ರತಿಭಟನೆ ನಡೆಸಿದರು.
ಜನವಾದಿ ಮಹಿಳಾ ಸಂಘದ ಮುಖಂಡೆ ಸುರೇಖಾ ರಜಪೂತ, ಅಂಗನವಾಡಿ ನೌಕರರ ಸಂಘದ ಜಿಲ್ಲಾಧ್ಯಕ್ಷೆ ಸುನಂದಾ ನಾಯಕ, ಅಂಗನವಾಡಿ ಜಿಲ್ಲಾ ಕಾರ್ಯದರ್ಶಿ ಭಾರತಿ ವಾಲಿ, ಸರಸ್ವತಿ ಮಠ, ಅಶ್ವಿನಿ ತಳವಾರ ಮಾತನಾಡಿ, ಸಿಎಎ ಹಿಂಪಡೆಯಬೇಕು. ಎನ್‌ಆರ್‌ಸಿ ಕೈಬಿಡಬೇಕು. ಮಹಿಳೆಯರಿಗಾಗಿ ಉದ್ಯೋಗ ಸೃಷ್ಟಿಸಿಕೊಡಬೇಕು. ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು. ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯಗಳನ್ನು ತಡೆಗಟ್ಟಬೇಕು. ಬೆಲೆ ಏರಿಕೆ ತಡೆಗಟ್ಟಬೇಕು. ಮಹಿಳೆಯರಿಗೆ ಶೇ.33 ಮೀಸಲಾತಿ ಜಾರಿಗೆ ತರಬೇಕೆಂದು ಆಗ್ರಹಿಸಿದರು.
ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಭೀಮಶಿ ಕಲಾದಗಿ, ಜಿಲ್ಲಾಧ್ಯಕ್ಷ ಅಣ್ಣಾರಾಯ ಈಳಗೇರ, ಜಿಲ್ಲಾ ಕಾರ್ಯದರ್ಶಿ ಭೀಮರಾಯ ಪೂಜಾರಿ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದರು.
ಸುವರ್ಣಾ ಹಲಗಣಿ, ಜಯಶ್ರೀ ಪೂಜಾರಿ, ಜನವಾದಿ ಮಹಿಳಾ ಸಂಘಟನೆಯ ಕಾರ್ಯದರ್ಶಿ ಶೈಲಾ ಕಟ್ಟಿ, ಹನೀಫಾ ಮೊಕಾಶಿ, ಲಲಿತಾ ಪೋಳ, ರಾಜೇಶ್ವರಿ ಸಂಕದ, ಗೀತಾ ಜಾಧವ, ಮಾದೇವಿ ರಾಠೋಡ, ಪ್ರತಿಭಾ ಕುರಡಿ, ಸರೋಜಿನಿ ಪಾಟೀಲ, ಉಷಾ ಕುಲಕರ್ಣಿ, ಸುರೇಖಾ ವಾಗ್ಮೋರೆ, ಲಕ್ಷ್ಮಿ ಗಣಜಲಿ, ಸವಿತಾ ಕೊಕಟನೂರ, ಬೋರಮ್ಮ ಸಿಂದಗಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.