ಜಿಲ್ಲೆ

ಸಿದ್ದು ಸರ್ಕಾರಕ್ಕೆ ಬೆಂಬಲ ಕೇಳಿದ ಜಾರಕಿಹೊಳಿ

Davangere - Desk - Mahesh Babu E

ಹೊಸದುರ್ಗ: ಉಪ್ಪಾರ ಸಮುದಾಯವನ್ನು ಸಾಮಾಜಿಕ, ಆರ್ಥಿಕ, ಶೈಕ್ಷಣಿಕವಾಗಿ ಅಭಿವೃದ್ಧಿಪಡಿಸಲು ಸರ್ಕಾರ ಬದ್ಧವಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿದರು.

ತಾಲೂಕಿನ ಬ್ರಹ್ಮವಿದ್ಯಾನಗರದ ಭಗೀರಥ ಗುರುಪೀಠದಲ್ಲಿ ಭಾನುವಾರ ಆಯೋಜಿಸಿದ್ದ ರಾಜ್ಯಮಟ್ಟದ ಭಗೀರಥ ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭದಲ್ಲಿ ಮಾತನಾಡಿದರು.

ಶೋಷಿತರ ಪರವಾಗಿರುವ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜನಪರವಾದ ಕೆಲಸ ಮಾಡುತ್ತಿದ್ದು, ನಿಮ್ಮೆಲ್ಲರ ಬೆಂಬಲ ಆಶೀರ್ವಾದ ಅಹಿಂದ ವರ್ಗದ ಹಿತ ಬಯಸುವ ಸಿದ್ದರಾಮಯ್ಯ ಸರ್ಕಾರಕ್ಕೆ ಬೇಕಿದೆ ಎಂದು ಕೋರಿದರು.