ಹಾವೇರಿ: ಜಾಂಡಿಸ್ ಕಾಯಿಲೆಯಿಂದ ಗುಣವಾಗಲಿಲ್ಲ ಎನ್ನುವ ಕಾರಣ ಯುವಕನೊಬ್ಬ ಇಲಿ ಪಾಶಾಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಕುರುಬಗೊಂಡ ಗ್ರಾಮದಲ್ಲಿ ಗುರುವಾರ ಸಂಭವಿಸಿದೆ.
ಗ್ರಾಮದ ಮಹಾಂತೇಶ ಮಂಜುನಾಥ ದುರಗಣ್ಣನವರ (24) ಮೃತ ಯುವಕ.
ಈತ ಜಾಂಡಿಸ್ ಕಾಯಿಲೆಯಿಂದ ಬಳಲುತ್ತಿದ್ದ. ಆಸ್ಪತ್ರೆಗೆ ತೋರಿಸಿದರೂ ಗುಣವಾಗದ ಕಾರಣ ಮನೆಯಲ್ಲಿ ಇಲಿ ಪಾಶಾಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.