ಶನಿವಾರಸಂತೆ: ಕೊಡ್ಲಿಪೇಟೆ ವಿದ್ಯಾಸಂಸ್ಥೆಯ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ವರ್ಷದ ಬಿಕಾಂ ವಿದ್ಯಾರ್ಥಿ ಜೆ.ಡಿ.ನಿಶಾಂತ್ ಕೊಡಗು ವಿಶ್ವವಿದ್ಯಾಲಯದ ಫುಟ್ಬಾಲ್ ತಂಡಕ್ಕೆ ಆಯ್ಕೆಯಾಗಿದ್ದಾರೆ.
ಇತ್ತೀಚಿಗೆ ಕೊಡಗು ವಿಶ್ವವಿದ್ಯಾಲಯ ವತಿಯಿಂದ ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಫುಟ್ಬಾಲ್ ಪಂದ್ಯಾವಳಿಯಲ್ಲಿ ತಂಡಕ್ಕೆ ಆಯ್ಕೆಯಾಗಿದ್ದಾರೆ.
ಆ ಮೂಲಕ ನಿಶಾಂತ್ ಕೇರಳದ ಕಲ್ಲಿಕೋಟೆಯಲ್ಲಿ ನಡೆಯಲಿರುವ ಅಂತರ ವಿಶ್ವವಿದ್ಯಾಲಯಗಳ ಫುಟ್ಬಾಲ್ ಪಂದ್ಯಾವಳಿಯಲ್ಲಿ ಕೊಡಗು ವಿವಿ ತಂಡವನ್ನು ಪ್ರತಿನಿಧಿಸಲಿದ್ದಾರೆ ಎಂದು ಕೊಡ್ಲಿಪೇಟೆ ವಿದ್ಯಾಸಂಸ್ಥೆ ಅಧ್ಯಕ್ಷ ಎಚ್.ಎಸ್.ಚಂದ್ರಮೌಳಿ ಮತ್ತು ಕಾಲೇಜು ಪ್ರಾಂಶುಪಾಲ ಎಂ.ಆರ್.ನಿರಂಜನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. ನಿಶಾಂತ್ ಜಾಗೇನಹಳ್ಳಿ ಗ್ರಾಮದ ದಿನೇಶ್ ಮತ್ತು ತೇಜಾವತಿ ದಂಪತಿ ಪುತ್ರ.