ಬಾಗಲಕೋಟೆ: ವಿಧಾನ ಪರಿಷತ್ತಿನ ವಾಯುವ್ಯ ಶಿಕ್ಷಕರ ಮತಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಶ್ರೀನಿವಾಸ ಗೌಡರ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದು, ಡಿಸೆಂಬರ್ ಎರಡನೇ ವಾರದಲ್ಲಿ ಬೃಹತ್ ಸಮಾವೇಶದ ಮೂಲಕ ರಾಜ್ಯ ನಾಯಕರ ಸಮ್ಮುಖಕ್ಕೆ ಜೆಡಿಎಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಳ್ಳಲಿದ್ದಾರೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಹನುಮಂತ ಮಾವಿನಮರದ ಹೇಳಿದರು.
ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರೊಂದಿಗೆ ಈಗಾಗಲೇ ಚರ್ಚೆ ನಡೆಸಿ ಜೆಡಿಎಸ್ ಪಕ್ಷದ ತತ್ವ, ಸಿದ್ದಾಂತಗಳನ್ನು ಮೆಚ್ಚಿ ಶ್ರೀನಿವಾಸ ಗೌಡರ ಪಕ್ಷಕ್ಕೆ ಆಗಮಿಸಿದ್ದಾರೆ. ಎಚ್.ಡಿ. ಕುಮಾರಸ್ವಾಮಿ ಅವರು ರಾಜ್ಯದಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ತರುವ ಸಂಕಲ್ಪ ಮಾಡಿದ್ದು, ಮಹತ್ವದ ಯೋಜನೆ, ಕಾರ್ಯಕ್ರಮ ನೀಡುವ ಭರವಸೆ ನೀಡಿದ್ದಾರೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಜಿಲ್ಲೆಯ ೭ ಮತಕ್ಷೇತ್ರದಲ್ಲಿಯೂ ಸ್ಪರ್ಧೆ
ಜಿಲ್ಲೆಯ ೭ ಮತಕ್ಷೇತ್ರಗಳಲ್ಲಿಯೂ ಜೆಡಿಎಸ್ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿದ್ದು, ಈಗಾಗಲೇ ೭ ಕ್ಷೇತ್ರಗಳಲ್ಲಿಯೂ ಸ್ಪಽðಸಲು ಅಭ್ಯರ್ಥಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಜನೇವರಿ ಮೊದಲನೇವಾರದಲ್ಲಿ ೭ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳ್ಳಲಿದೆ. ನಾನು ಬಾದಾಮಿ ಮತಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲು ಕುಮಾರಸ್ವಾಮಿ ಘೋಷಣೆ ಮಾಡಿದ್ದಾರೆ. ಜಿಲ್ಲೆಯಲ್ಲಿ ಪಕ್ಷ ಸಂಘಟನೆ ಉತ್ತಮವಾಗಿ ನಡೆದಿದೆ. ಈ ಚುನಾವಣೆಯಲ್ಲಿ ಜೆಡಿಎಸ್ ಶಕ್ತಿ ಅನಾವರಣಗೊಳ್ಳಲಿದೆ ಎಂದು ಹೇಳಿದರು.
ಜೆಡಿಎಸ್ ಬಾಗಲಕೋಟೆ ತಾಲೂಕಾಧ್ಯಕ್ಷ ಕೃಷ್ಣಾ ಪಾಟೀಲ, ಮುಖಂಡರಾದ ಶ್ರೀನಿವಾಸ ಗೌಡರ, ಸಲೀಂ ಮೋಮಿನ, ಯಾಸೀನ ನದಾಫ, ಶಿವಕುಮಾರ ನಾಯ್ಕ, ಯಾಸೀನ ಮಿರ್ಜಿ, ರಶೀದ ಬಾಗವಾನ, ರೇಣುಕಾ ಭಜಂತ್ರಿ ಉಪಸ್ಥಿತರಿದ್ದರು.