ಹುಬ್ಬಳ್ಳಿ: ಜನತಾದಳ ಜಾತ್ಯತಿತ ಪಕ್ಷದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನಗರಕ್ಕೆ ಆಗಮಿಸಿರುವ ರಾಜ್ಯ ಕೋರ್ ಕಮಿಟಿ ಅಧ್ಯಕ್ಷ, ಮಾಜಿ ಸಚಿವ ಜಿ.ಟಿ. ದೇವೇಗೌಡ ಅವರ ನೇತೃತ್ವ ಪದಾಧಿಕಾರಿಗಳ ತಂಡದವರು ಶುಕ್ರವಾರ ಇಲ್ಲಿಯ ಮೂರುಸಾವಿರ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದರು.
ಕೋರ್ ಕಮಿಟಿ ಸದಸ್ಯರು ಮೂರುಸಾವಿರ ಮಠಕ್ಕೆ ತೆರಳಿ ಕರ್ತೃ ಶ್ರೀ ಗುರುಸಿದ್ದೇಶ್ವರರ ಗದ್ದುಗೆಗೆ ಪೂಜೆ ಸಲ್ಲಿಸಿ ನಂತರ ಜಗದ್ಗುರು ಶ್ರೀಗುರುಸಿದ್ದರಾಜಯೋಗೀಂದ್ರ ಸ್ವಾಮೀಜಿ ದರ್ಶನ ಪಡೆದರು.
ಜೆಡಿಎಸ್ ಕೋರ್ ಕಮಿಟಿ ಸದಸ್ಯ, ಮಾಜಿ ಸಚಿವ ಎಚ್.ಕೆ. ಕುಮಾರಸ್ವಾಮಿ, ಮಾಜಿ ಸಚಿವ ವೆಂಕಟರಾವ್ ನಾಡಗೌಡ, ಶಾಸಕ ರಾಜೂಗೌಡ, ಮಾಜಿ ಶಾಸಕ ಸುರೇಶ ಗೌಡ, ಮಾಜಿ ಉಪ ಸಭಾಧ್ಯಕ್ಷ ಎಂ. ಕೃಷ್ಣ ರೆಡ್ಡಿ, ದೊಡ್ಡಪ್ಪಗೌಡ ಪಾಟೀಲ, ಕೆ.ಎಂ. ತಿಮ್ಮರಾಯಪ್ಪ, ವೀರಭದ್ರಪ್ಪ ಹಾಲಹರವಿ, ಮಹಾನಗರ ಜಿಲ್ಲಾಧ್ಯಕ್ಷ ಗುರುರಾಜ ಹುಣಸಿಮರದ, ಗ್ರಾಮಾಂತರ ಜಿಲ್ಲಾಧ್ಯಕ್ಷ ಬಿ.ಬಿ. ಗಂಗಾಧರಮಠ, ಸಿದ್ಧಲಿಂಗೇಶ್ವರಗೌಡ ಮಹಾಂತಒಡೆಯರ, ಜಿಲ್ಲಾ ಕಾರ್ಯದರ್ಶಿ ನವೀನಕುಮಾರ ಮಡಿವಾಳರ ಮುಂತಾದವರು ಉಪಸ್ಥಿತರಿದ್ದರು.