ವಿಜಯವಾಣಿ ಸುದ್ದಿಜಾಲ ಕಲಬುರಗಿ
ಕಲ್ಯಾಣ ಕರ್ನಾಟಕದಲ್ಲಿ ಜಾತ್ಯಾತೀತ ಜನತಾ ದಳ ಪಕ್ಷವನ್ನು ಮತ್ತಷ್ಟು ಸಂಘಟಿಸಲು ಸೆ.೨೬ ರಂದು ಬೆಳಗ್ಗೆ ೧೧ ಗಂಟೆಗೆ ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ `ಜೆಡಿಎಸ್ ಪುನಶ್ವೇತನ ಪರ್ವ' ಜರುಗಲಿದೆ ಎಂದು ಜೆಡಿಎಸ್ ಕೋರ್ ಕಮೀಟಿ ಸದಸ್ಯರಾದ ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ ಮತ್ತು ಜಿಲ್ಲಾಧ್ಯಕ್ಷ ಸುರೇಶ ಮಹಾಂಗಾAವಕರ್ ತಿಳಿಸಿದ್ದಾರೆ.
ಜೆಡಿಎಸ್ ರಾಜ್ಯಾದ್ಯಕ್ಷ ಸಿ.ಎಂ ಇಬ್ರಾಹಿಂ, ಮಾಜಿ ಸಚಿವ ಎಚ್.ಡಿ.ರೇವಣ್ಣ, ರಾಜ್ಯ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ ದೇವೆಗೌಡ, ಕಾರ್ಯಧ ಅಲಕೋಡ್ ಹನುಮಂತಪ್ಪ, ಸಂಚಾಲಕರಾದ ವೈ.ಎಸ್.ವಿ.ದತ್ತಾ ಸೇರಿದಂತೆ ಪಕ್ಷದ ಮುಖಂಡರು, ಪ್ರಮುಖರು ಪಾಲ್ಗೊಳ್ಳುವರು. ಬೀದರ್,ಕಲಬುರಗಿ,ಯಾದರಿಗಿ ಜಿಲ್ಲೆಯ ಜೆಡಿಎಸ್ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ. ಜಿಲ್ಲೆಯ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲ ಭಾಗಿಯಾಗುವಂತೆ ನರಿಬೋಳ ತಿಳಿಸಿದ್ದಾರೆ.