ಜಿಲ್ಲೆ

ಪಂಚರತ್ನ ರಥಯಾತ್ರೆ ವರುಣನ ಅಡ್ಡಿ !!

ಜಗನ್ನಾಥ್ ಕಾಳೇನಹಳ್ಳಿ

ತುಮಕೂರು

ಜಿಲ್ಲೆಯಲ್ಲಿ ಎರಡನೇ ಹಂತದ ಜೆಡಿಎಸ್‌ನ ಪಂಚರತ್ನ ರಥಯಾತ್ರೆಯನ್ನು ಮಳೆಯಿಂದಾಗಿ 4 ದಿನ ಮಟ್ಟಿಗೆ ಮುಂದೂಡಲಾಗಿದೆ.

ಚಿಕ್ಕನಾಯಕನಹಳ್ಳಿ ವಿಧಾನಸಭೆ ಕ್ಷೇತ್ರದಿಂದ ಪುನಾರಂಭವಾಗಬೇಕಿದ್ದ ಡಿ.11 ರಿಂದ 13ರವರೆಗೆ ನಿಗದಿಯಾಗಿದ್ದ ಪಂಚರತ್ನ ರಥಯಾತ್ರೆಯನ್ನು 4 ದಿನಗಳ ಮಟ್ಟಿಗೆ ಮುಂದೂಡಲಾಗಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.

ಬಂಗಾಳಕೊಲ್ಲಿಯಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಜಿಲ್ಲೆ ಸೇರಿದಂತೆ ರಾಜ್ಯದ ಒಳನಾಡು ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಈ ಕಾರಣಕ್ಕೆ ಪಂಚರತ್ನ ರಥಯಾತ್ರೆಯನ್ನು ಅನಿವಾರ್ಯವಾಗಿ ಮುಂದಕ್ಕೆ ಹಾಕಲಾಗಿದೆ. ಪೂರ್ವ ನಿಗದಿತ ವೇಳಾಪಟ್ಟಿಯಂತೆ ರಥಯಾತ್ರೆಯು ಡಿ.11ರಂದು ಚಿಕ್ಕನಾಯಕನಹಳ್ಳಿ, 12 ರಂದು ತುರುವೇಕೆರೆ, 13 ರಂದು ಕುಣಿಗಲ್ ಕ್ಷೇತ್ರಗಳಲ್ಲಿ ರಥಯಾತ್ರೆ ನಡೆಯಬೇಕಿತ್ತು. 14 ರಂದು ಗ್ರಾಮಾಂತರದಲ್ಲಿ ನಿಗದಿಯಾಗಿದ್ದ ರಥಯಾತ್ರೆಯನ್ನು 29ಕ್ಕೆ ಈ ಮೊದಲೇ ಮುಂದೂಡಲಾಗಿತ್ತು.