ಜಿಲ್ಲೆ

ಎಚ್‌ಡಿಕೆಗೆ ಮತ್ತೊಮ್ಮೆ ಅಧಿಕಾರ ಕೊಡಿ: ಮನ್‌ಮುಲ್ ಅಧ್ಯಕ್ಷ ಬಿ.ಆರ್.ರಾಮಚಂದ್ರು ಮನವಿ

reportermys

ಮಂಡ್ಯ: ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಜನರು ಮತ್ತೊಮ್ಮೆ ಅಧಿಕಾರ ಕೊಡಬೇಕು ಎಂದು ಮನ್‌ಮುಲ್ ಅಧ್ಯಕ್ಷರೂ ಆದ ಮಂಡ್ಯ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಮುಖಂಡ ಬಿ.ಆರ್.ರಾಮಚಂದ್ರು ಮನವಿ ಮಾಡಿದರು.

ತಾಲೂಕಿನ ತಂಡಸನಹಳ್ಳಿ ಗ್ರಾಮದಲ್ಲಿ ಜೆಡಿಎಸ್ ಪಂಚರತ್ನ ಯೋಜನೆ ಕುರಿತು ಮನೆ ಮನೆ ಪ್ರಚಾರ ನಡೆಸಿದ ವೇಳೆ ಮಾತನಾಡಿದರು. ಎಚ್‌ಡಿಕೆ ಸಿಎಂ ಆಗಿದ್ದ ವೇಳೆ ಹಲವು ಜನಪರ ಕಾರ್ಯಕ್ರಮಗಳನ್ನು ನೀಡಿದ್ದಾರೆ. ಜನರ ಸಮಸ್ಯೆಗಳಿಗೆ ಸ್ಪಂದಿಸುವ ಹಾಗೂ ಪರಿಹಾರ ಮಾಡಲು ಪ್ರಾದೇಶಿಕ ಪಕ್ಷ ಜೆಡಿಎಸ್‌ನ ಅವಶ್ಯಕತೆ ಇದೆ ಎಂದರು.

ಈ ಬಾರಿ ಪಕ್ಷ ಅಧಿಕಾರಕ್ಕೆ ಬಂದರೆ ಎಲ್ಲ ವರ್ಗಕ್ಕೂ ಅನುಕೂಲವಾಗುವಂತಹ ಪಂಚರತ್ನ ಯೋಜನೆಯನ್ನು ಜಾರಿಗೊಳಿಸುವುದಾಗಿ ವರಿಷ್ಠರು ಘೋಷಣೆ ಮಾಡಿದ್ದಾರೆ. ಅದರಂತೆ, ಯೋಜನೆಗಳ ಕುರಿತು ಮಂಡ್ಯ ಕ್ಷೇತ್ರ ವ್ಯಾಪ್ತಿಯಲ್ಲಿ ಮನೆ ಮನೆಗೆ ತೆರಳಿ ಪ್ರಚಾರ ಮಾಡಲಾಗುತ್ತಿದೆ. ಇದಕ್ಕೆ ಜನರಿಂದಲೂ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ಇನ್ನು ಮಂಡ್ಯ ಜೆಡಿಎಸ್ ಭದ್ರಕೋಟೆಯಾಗಿದ್ದು, ಈ ಬಾರಿ ಚುನಾವಣೆಯಲ್ಲಿಯೂ ಜನರು ಬೆಂಬಲ ನೀಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಟಿ.ಸಿ.ಶಂಕರಗೌಡ, ಶಂಭು ಸೇವಾ ಟ್ರಸ್ಟ್ ಕಾರ್ಯದರ್ಶಿ ಬಿ.ಆರ್.ಸುರೇಶ್, ಕಲ್ಪನಾ ಬಿ.ಆರ್.ರಾಮಚಂದ್ರು, ಜಯಮ್ಮ, ನಿರ್ಮಲಾ, ಪವಿತ್ರಾ, ಮಮತಾ, ನವೀನ್, ಮೋಹನ್, ಹೇಮಂತ್, ರಾಘು, ಮಹೇಶ್ ಇತರರಿದ್ದರು.