ಜಿಲ್ಲೆ

ಜಿಲ್ಲಾ ಸಮನ್ವಯ ಸಭೆ ೭ರಂದು : ಬಾಲರಾಜ ಗುತ್ತೇದಾರ್ ಹೇಳಿಕೆ

ಬಾಬುರಾವ ಯಡ್ರಾಮಿ



ವಿಜಯವಾಣಿ ಸುದ್ದಿಜಾಲ ಕಲಬುರಗಿ
ಲೋಕಸಭೆ ಕ್ಷೇತ್ರದಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಪರ ಸಕ್ರಿಯವಾಗಿ ಪ್ರಚಾರ ಮಾಡಲಾಗುವುದು. ರಾಜ್ಯಮಟ್ಟದಲ್ಲಿ ಸಮನ್ವಯ ಸಭೆ ನಡೆದಿದೆ. ಏ.೭ರಂದು ಜಿಲ್ಲಾ ಮಟ್ಟದ ಬಿಜೆಪಿ-ಜೆಡಿಎಸ್ ಸಮನ್ವಯ ಸಭೆ ನಡೆಸಲಾಗುವುದು ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಬಾಲರಾಜ ಗುತ್ತೇದಾರ್ ಹೇಳಿದರು.
ಸೀಟ್ ಹಂಚಿಕೆ ಗೊಂದಲದಿAದ ಕೆಲ ದಿನ ಸಮಸ್ಯೆಯಿತ್ತು. ಇದೀಗ ಎಲ್ಲ ಗೊಂದಲಗಳಿಗೂ ತೆರೆ ಬಿದ್ದಿದೆ. ನಾವು ಎಲ್ಲರೂ ಕೂಡಿ ಪಕ್ಷ ಸಂಘಟಿಸುತ್ತ, ಮೈತ್ರಿ ಅಭ್ಯರ್ಥಿ ಗೆಲುವಿಗೆ ಶ್ರಮಿಸುತ್ತೇವೆ. ಜಿಲ್ಲೆಯಲ್ಲಿ ಕುಡಿವ ನೀರಿನ ಸಮಸ್ಯೆ ತೀವ್ರವಾಗಿದೆ. ಸರ್ಕಾರ ಬರ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ. ಬೆಣ್ಣೆ ಹಚ್ಚುವ ಕೆಲಸ ಮಾಡಲಾಗುತ್ತಿದೆ. ಚುನಾವಣೆ ನೀತಿ ಸಂಹಿತೆ ಇದ್ದರೂ ರಾಜಾರೋಷವಾಗಿ ಅಕ್ರಮ ಮರಳು ಮಾಫಿಯಾ ನಡೆಯುತ್ತಿದೆ. ಒಂದು ಟ್ರಿಪರ್ ಮರಳು ೧.೮೦ ಲಕ್ಷ ರೂ. ಮಾರಾಟ ಮಾಡಲಾಗುತ್ತಿದೆ. ಬಡವರು ಮನೆ ಕಟ್ಟಲು ಆಗದಂತ ಸ್ಥಿತಿ ನಿರ್ಮಾಣವಾಗಿದೆ. ಇದಕ್ಕೆ ಕಡಿವಾಣ ಹಾಕಬೇಕು ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.
ಜೆಡಿಎಸ್ ರಾಜ್ಯ ಕಾರ್ಯದರ್ಶಿ ಶಿವಕುಮಾರ ನಾಟೀಕಾರ, ಪ್ರಮುಖರಾದ ಬಸವರಾಜ ಬಿರಬಿಟ್ಟಿ ಇತರರಿದ್ದರು.