ಜಿಲ್ಲೆ

ಜೆಡಿಎಸ್‌ನವರು ಸಂತ್ರಸ್ತರಿಗೆ ನ್ಯಾಯ ಒದಗಿಸಲಿ

ಅವಿನಾಶ್ ಜೈನಹಳ್ಳಿ

ಮೈಸೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಟುಂಬದ ಗೌರವಕ್ಕೆ ಸಂಸದ ಪ್ರಜ್ವಲ್ ರೇವಣ್ಣ ಚ್ಯುತಿ ತಂದಿದ್ದಾರೆಯೇ ಹೊರತು ಇದರಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಪಾತ್ರ ಇಲ್ಲ ಎಂದು ನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ವಕ್ತಾರ ಎಸ್.ರಾಜೇಶ್ ತಿಳಿಸಿದರು.

ಜೆಡಿಎಸ್‌ನವರಿಗೆ ಸಾಮಾಜಿಕ ಕಾಳಜಿ ಇದ್ದಲ್ಲಿ ಮಹಿಳೆಯರ ಮೂಲಭೂತ ಹಕ್ಕುಗಳ ರಕ್ಷಣೆಗಾಗಿ, ಪೆನ್‌ಡ್ರೈವ್ ಪ್ರಕರಣದ ಸಂತ್ರಸ್ತರಿಗೆ ನ್ಯಾಯ ದೊರಕಿಸಿಕೊಡುವ ಬಗ್ಗೆ ಹೋರಾಟ ನಡೆಸಲಿ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.

ಮಣಿಪುರದಲ್ಲಿ ಹಾಡಹಗಲೇ ಮಹಿಳೆಯನ್ನು ಬೆತ್ತಲೆಗೊಳಿಸಿ ನಡುಬೀದಿಯಲ್ಲಿ ಕರೆದೊಯ್ದ ಸಂದರ್ಭದಲ್ಲಿ ಜೆಡಿಎಸ್ ಮುಖಂಡರಾದ ಸಾ.ರಾ.ಮಹೇಶ್, ಜಿ.ಟಿ.ದೇವೇಗೌಡ ಮೊದಲಾದವರು ಏಕೆ ಮಾತನಾಡಲಿಲ್ಲ. ಈ ಪ್ರಕರಣದ ಬಗ್ಗೆ ಸಿಬಿಐ ತನಿಖೆಗೆ ಏಕೆ ಆಗ್ರಹಿಸಲಿಲ್ಲ ಎಂದು ಪ್ರಶ್ನಿಸಿದರು.

ಸುದ್ದಿಗೋಷ್ಠಿಯಲ್ಲಿ ಕುರುಬಾರಹಳ್ಳಿ ಪ್ರಕಾಶ್ ಇದ್ದರು.