ಕನಕಪುರ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ವ ಕ್ಷೇತ್ರ ಕನಕಪುರದಲ್ಲಿ ಜೆಡಿಎಸ್ ಜಯಭೇರಿ ಬಾರಿಸುವ ಮೂಲಕ ಕಾಂಗ್ರೆಸ್ ಗೆ ಮುಖಭಂಗವಾಗಿದೆ.
ಇಲ್ಲಿನ ನಗರ ಸಭೆಯ 5ನೇ ವಾರ್ಡ್‌ಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ - ಜೆ.ಡಿ.ಎಸ್ ನಡುವೆ ನಡೆದ ಜಿದ್ದಾಜಿದ್ದಿ ಸ್ಪರ್ಧೆಯಲ್ಲಿ ಜೆ.ಡಿ.ಎಸ್ ಅಭ್ಯರ್ಥಿ ಜಯಭೇರಿ ಬಾರಿಸುವ ಮೂಲಕ ಆಡಳಿತರೂಡ ಕಾಂಗ್ರೆಸ್ ಪಕ್ಷಕ್ಕೆ ಭಾರೀ ಮುಖಭಂಗವಾಗಿದೆ.
ಸ್ವತಃ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರ ಸ್ವ ಕ್ಷೇತ್ರ ಕನಕಪುರದಲ್ಲಿಯೇ ಕೈ ಪಕ್ಷಕ್ಕೆ ಭಾರೀ ಮುಖಭಂಗವಾಗಿದೆ. ಜೆ.ಡಿ.ಎಸ್ ಅಭ್ಯರ್ಥಿ ಲೋಕೇಶ್‌ರವರು ತಮ್ಮ ಪ್ರತಿಸ್ಪರ್ಧಿ ಕಾಂಗ್ರೇಸ್‌ನ ಚಾಮರಾಜುರನ್ನು ಸೋಲಿಸುವ ಮೂಲಕ ಜಯಭೇರಿ ಭಾರಿಸಿದ್ದಾರೆ.
ನಗರದ 5ನೇ ವಾರ್ಡ್ ಕುರುಪೇಟೆಯಲ್ಲಿ ಕಾಂಗ್ರೆಸ್‌ನಿಂದ ಗೆದ್ದಿದ್ದ ಕಾಟರ್ ಕೃಷ್ಣಪ್ಪ ನಗರಸಭೆ ಅಧ್ಯಕ್ಷರಾಗಿದ್ದರು. ಅವರು ಅಪಘಾತದಲ್ಲಿ ಮೃತಪಟ್ಟ ಹಿನ್ನಲೆಯಲ್ಲಿ ಉಪಚುನಾವಣೆ ನಡೆದಿತ್ತು. ಅದರಂತೆ ಗುರುವಾರ ಚುನಾವಣೆಯನ್ನು ನಡೆಸಲಾಗಿತ್ತು. ಶನಿವಾರ ತಾಲೂಕು ಕಛೇರಿಯಲ್ಲಿ ನಡೆದ ಎಣಿಕೆ ಕಾರ್ಯದಲ್ಲಿ ಜೆ.ಡಿ.ಎಸ್‌ನ ಲೋಕೆಶ್ 569 ಕಾಂಗ್ರೇಸ್‌ನ ಚಾಮರಾಜು 519 ಬಿ.ಜೆ.ಪಿ ಅಭ್ಯರ್ಥಿ ಶಿವರುದ್ರ 18 ಮತಗಳನ್ನು ಪಡೆದಿದ್ದರು. ಅಂತಿಮವಾಗಿ ಜೆ.ಡಿ.ಎಸ್ ಅಭ್ಯರ್ಥಿ 50 ಮತಗಳ ಅಂತರದಿಂದ ವಿಜಯಶಾಲಿಯಾಗಿದ್ದರೆ.