ಬೆಳಗಾವಿ: ಮಹಾನಗರದಲ್ಲಿ ಬಹುದಿನಗಳಿಂದ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ಅಕಾರಿಗಳು ಗಮನ ಹರಿಸುತ್ತಿಲ್ಲ. ನಿರಂತರ ನೀರು ಯೋಜನೆಗೊಳಪಟ್ಟ ವಾರ್ಡ್‌ಗಳಲ್ಲಿ 2-3 ದಿನಕ್ಕೊಮ್ಮೆ, ಉಳಿದ ವಾರ್ಡ್‌ಗಳಲ್ಲಿ ವಾರಕ್ಕೊಮ್ಮೆ ಕುಡಿಯುವ ನೀರು ಪೂರೈಕೆಯಾಗುತ್ತಿದೆ. ಅಲ್ಲದೆ, ನೀರು ಸರಬರಾಜಿನಲ್ಲಿ ಸಮಪರ್ಕ ನಿರ್ವಹಣೆ ಸರಿಯಾಗಿ ಆಗುತ್ತಿಲ್ಲ. ಇದಕ್ಕೆ ಪಾಲಿಕೆ ಮತ್ತು ಎಲ್ ಆ್ಯಂಡ್ ಟಿ ಅಕಾರಿಗಳ ಬೇಜವಾಬ್ದಾರಿ ಕಾರಣ ಎಂದು ಸದಸ್ಯರು ಸಭೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.
ನಗರದ ಪಾಲಿಕೆ ಪರಿಷತ್ ಸಭಾಂಗಣದಲ್ಲಿ ಗುರುವಾರ ಪಾಲಿಕೆ ಮೇಯರ್ ಮಂಗೇಶ ಪವಾರ, ಉಪಮೇಯರ್ ವಾಣಿ ಜೋಶಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಗುಡುಗಿದ ಸದಸ್ಯರು, ಸದ್ಯ ಬೆಳಗಾವಿ ಮಹಾನಗರ ಪ್ರದೇಶದ ವ್ಯಾಪ್ತಿಯಲ್ಲಿ ಸುಮಾರು 5.88 ಲಕ್ಷ ಜನರಿಗೆ , 256 ಹೋಟೆಲ್, 325ಕ್ಕೂ ಅಕ ಸಣ್ಣ ಮತ್ತು ಅತಿ ಸಣ್ಣ ಹಾಗೂ ಬೃಹತ್ ಕೈಗಾರಿಕೆಗಳು ಸೇರಿದಂತೆ ವಾಣಿಜ್ಯ ಚಟುವಟಿಕೆಗಳಿಗೆ ನಿತ್ಯ ಕುಡಿಯುವ ನೀರಿಗಾಗಿ ಹಿಡಕಲ್ ಜಲಾಶಯ ಮತ್ತು ರಕ್ಕಸಕೊಪ್ಪ ಜಲಾಶದಿಂದ ಪ್ರತಿನಿತ್ಯ 108 ಎಂಎಲ್‌ಡಿ ನೀರು ಪೂರೈಕೆಯಾಗುತ್ತಿದೆ. ಇದರಲ್ಲಿ ಕುಡಿಯಲು 75 ಎಂಎಲ್‌ಡಿಯಷ್ಟು ನೀರು ಬಳಕೆಯಾಗುತ್ತಿದೆ. 58 ವಾರ್ಡ್‌ಗಳಲ್ಲಿನ ಜನರಿಗೆ 24್ಡ7 ನೀರಿನ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ 2005ರಲ್ಲಿ ವಿಶ್ವಬ್ಯಾಂಕ್ ನೆರವಿನೊಂದಿಗೆ ನಿರಂತರ ನೀರು ಸರಬರಾಜು ಯೋಜನೆಯನ್ನು ಪ್ರಾಯೋಗಿಕವಾಗಿ 10 ವಾರ್ಡ್‌ಗಳಲ್ಲಿ ಅನುಷ್ಠಾನಗೊಳಿಸಲಾಗಿತ್ತು. ಬಳಿಕ ಇನ್ನುಳಿದ 48 ವಾರ್ಡ್‌ಗಳಿಗೆ 24್ಡ7 ಯೋಜನೆ ವಿಸ್ತರಿಸಲು 2023ರಿಂದಲೇ ಚಾಲನೆ ನೀಡಲಾಗಿದೆ. ಆದರೆ, ಇಲ್ಲಿಯವರೆಗೆ ಯೋಜನೆ ಅರ್ಧಭಾಗ ಕೂಡ ಪೂರ್ಣಗೊಂಡಿಲ್ಲ. ಹೀಗಾಗಿ ಎಲ್ ಆ್ಯಂಡ್ ಟಿ ಕಂಪನಿಯಿಂದ ಯೋಜನೆ ವಾಪಸ್ ಪಡೆದುಕೊಳ್ಳಬೇಕು ಎಂದು ಸದಸ್ಯರು ಒತ್ತಾಯಿಸಿದರು.
ಇದಕ್ಕೆ ಸ್ಪಂದಿಸಿದ ಪಾಲಿಕೆ ಆಯುಕ್ತೆ ಶುಭ ಬಿ, ನಗರದ ಎಲ್ಲ ವಾರ್ಡ್‌ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗುತ್ತಿದೆ. ಎಲ್ ಆ್ಯಂಡ್ ಟಿ ಕಂಪನಿ ಅಕಾರಿಗಳ ನಿರ್ಲಕ್ಷ್ಯ ಮಾಡುತ್ತಿರುವುದು ಸರಿಯಲ್ಲ. ಕಠಿಣ ಕ್ರಮಕೈಗೊಳ್ಳುವ ಮುನ್ನ ನೀರಿನ ಸಮಸ್ಯೆ ಪರಿಹರಿಸುವ ಕೆಲಸ ಮಾಡಬೇಕು. ಆಯಾ ವಾರ್ಡ್‌ಗಳ ಸದಸ್ಯರೊಂಗೆ ಚರ್ಚಿಸಬೇಕು ಎಂದು ಸೂಚಿಸಿದರು.
ಬಂದ್ ಆಗಿರುವ ಕೊಳೆವೆ ಬಾವಿಗಳಿಗೆ ಲಕ್ಷಾಂತರ ರೂ.ವೆಚ್ಚ: ಬೆಳಗಾವಿ ಮಹಾನಗರ ಪಾಲಿಕೆಯ 58 ವಾರ್ಡ್‌ಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಶಾಸಕರು, ಸಂಸದರ ಅನುದಾನ ಸೇರಿ ವಿವಿಧ ಯೋಜನೆಗಳಡಿಯಲ್ಲಿ ನಿರ್ಮಿತಿ ಕೇಂದ್ರದ ಮೂಲಕ ಕೊಳವೆ ಬಾವಿ ಕೊರೆಸಲಾಗಿದೆ. ಆದರೆ, ವಿವಿಧ ಕಾರಣಗಳಿಂದ ಕೊಳವೆ ಬಾವಿಗಳ ಬಳಕೆಯಾಗದೆ ಬಂದ್ ಆಗಿವೆ. ಆದರೆ, ದಾಖಲೆಗಳಲ್ಲಿ ಕೊಳವೆ ಬಾವಿಗಳ ಹೆಸರಿನಲ್ಲಿ ಲಕ್ಷಾಂತರ ರೂ. ವೆಚ್ಚ ಮಾಡಲಾಗುತ್ತಿದೆ. ಆದರೆ, ಈ ಬಾವಿಗಳನ್ನು ಯಾರು ನಿರ್ವಹಣೆ ಮಾಡುತ್ತಿದ್ದಾರೆ ಎಂಬುದು ಗೊತ್ತಿಲ್ಲ. ಯಾರನ್ನು ಕೇಳಿದರೂ ನಮ್ಮ ವ್ಯಾಪ್ತಿಗೆ ಬರುವುದಿಲ್ಲ ಎನ್ನುತ್ತಿದ್ದಾರೆ. ಹಾಗಾದರೆ ದಾಖಲೆಯಲ್ಲಿರುವ 140 ಹೊಸ ಕೊಳವೆ ಬಾವಿಗಳು ಯಾರು ಎಂಬುದನ್ನು ಅಕಾರಿಗಳು ಸ್ಪಷ್ಟಪಡಿಸಬೇಕು ಎಂದು ಸದಸ್ಯರು ಆಗ್ರಹಿಸಿದರು.
ಬೆಳಗಾವಿ ಮಹಾನಗರಕ್ಕೆ ಘಟಪ್ರಭಾ, ರಕ್ಕಸಕೊಪ್ಪ, ಕೊಳವೆ ಬಾವಿ, ತೆರೆದ ಬಾವಿಗಳ ಮೂಲಕ ಕುಡಿಯುವ ನೀರು ಪೂರೈಸುವ ಸೌಲಭ್ಯಗಳಿದ್ದರೂ ಟ್ಯಾಂಕರ್ ಮೂಲಕ ನೀರು ಪೂರೈಸಲು ಹೊರಟಿರುವುದು ಸರಿಯಲ್ಲ. ಟ್ಯಾಂಕರ್ ನೀರು ಪೂರೈಕೆ ಹೆಸರಿನಲ್ಲಿ ಸರ್ಕಾರದ ಅನುದಾನ ದುರ್ಬಳಕೆ ಆಗುತ್ತಿದೆ ವಿನಃ ನೀರಿನ ಸಮಸ್ಯೆ ಪರಿಹರಿಯುತ್ತಿಲ್ಲ. ಎಲ್ ಆ್ಯಂಡ್ ಟಿ ಅವರೇ ಟ್ಯಾಂಕರ್ ನೀರಿನ ಮೊತ್ತ ಭರಿಸಬೇಕು. ಯಾವುದೇ ಕಾರಣಕ್ಕೂ ಸರ್ಕಾರ ಅನುದಾನ ಬಳಕೆ ಮಾಡಬಾರದು. ಟ್ಯಾಂಕರ್ ನೀರು ಪೂರೈಕೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಅಕ್ರಮ ಜಾಲ ಭಾಗಿಯಾಗುವ ಸಾಧ್ಯತೆ ಹೆಚ್ಚಿದೆ ಎಂದು ಸದಸ್ಯರು ದೂರಿದರು.
ಬೆಳಗಾವಿ ನಗರದ ಜನತೆಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಎಚ್ಚರಿಕೆ ವಹಿಸುವಂತೆ ಎಲ್ ಆ್ಯಂಡ್ ಟಿ ಕಂಪನಿ ಅಕಾರಿಗಳಿಗೆ ಎಚ್ಚರಿಕೆ ನೀಡಲಾಗಿದೆ. ಬೆಳಗಾವಿ ದಕ್ಷಿಣ ಮತ್ತು ಉತ್ತರ ಭಾಗದಲ್ಲಿ 28 ಕುಡಿಯುವ ನೀರಿನ ಟ್ಯಾಂಕರ್ ವ್ಯವಸ್ಥೆ ಮಾಡಲಾಗಿದೆ. ಕೊಳವೆ ಬಾವಿ ದುರಸ್ತಿಗೆ ನಿರ್ಲಕ್ಷ್ಯ ಮಾಡಿದರೆ ಕಠಿಣ ಕ್ರಮ ಎಚ್ಚರಿಕೆ ನೀಡಲಾಗಿದೆ. | ಮಂಗೇಶ ಪವಾರ ಪಾಲಿಕೆ ಮೇಯರ್