ಜಿಲ್ಲೆ

ಝರಿನ ಬಣಕಲ್ ಗ್ರಾಮ ಪಂಚಾಯಿತಿ ಅಧ್ಯಕ್ಷ

ಬಣಕಲ್: ಬಣಕಲ್ ಗ್ರಾಪಂ ನೂತನ ಅಧ್ಯಕ್ಷರಾಗಿ ಝರಿನ, ಉಪಾಧ್ಯಕ್ಷರಾಗಿ ಲೀಲಾವತಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಬಣಕಲ್ ಪಂಚಾಯಿತಿ ಕಚೇರಿಯಲ್ಲಿ ಎರಡನೇ ಅವಧಿಗೆ ನಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಝರಿನ ಉಪಾಧ್ಯಕ್ಷೆ ಸ್ಥಾನಕ್ಕೆ ಲೀಲಾವತಿ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಅಧ್ಯಕ್ಷರಾಗಿ ಝರಿನ, ಉಪಾಧ್ಯಕ್ಷರಾಗಿ ಲೀಲಾವತಿ ಅವಿರೋಧವಾಗಿ ಆಯ್ಕೆಯಾದರು.
ಚುನಾವಣಾಧಿಕಾರಿ ನವೀನ್, ಪಿಡಿಒ ಕೃಷ್ಣಪ್ಪ, ಗ್ರಾಪಂ ಸದಸ್ಯರು, ಮೂಡಿಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಂದ್ರಗೌಡ, ಬಣಕಲ್ ಹೋಬಳಿ ಕಾಂಗ್ರೆಸ್ ಅಧ್ಯಕ್ಷ ಸುಬ್ರಹ್ಮಣ್ಯ, ಪ್ರಧಾನ ಕಾರ್ಯದರ್ಶಿ ಸಂಪತ್ ಕುಮಾರ್, ದೇವರಾಜ್ ಸಬ್ಲಿ, ಪ್ರಧಾನ ಕಾರ್ಯದರ್ಶಿ ಉಮರ್, ಸುಂದರೇಶ್, ಮನೋಜ್ ಬೆಟ್ಟಗೆರೆ, ಹರೀಶ್, ಅಬ್ದುಲ್ ರೆಹಮಾನ್, ಅಜೀಜ್, ಜಿ.ಬಿ ಅರುಣ್, ಚಂದ್ರಯ್ಯ, ರುದ್ರಯ್ಯ, ವಿಕ್ರಂ, ರಮೇಶ್ ಗುಡ್ಡಟ್ಟಿ, ಬಿ.ಸಿ ಪ್ರವೀಣ್, ತರುವೆ ಗ್ರಾಪಂ ಅಧ್ಯಕ್ಷ ಸತೀಶ್ ಇದ್ದರು.