ಸಿರವಾರ: ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕೇಂದ್ರ ಜಲಶಕ್ತಿ ಸಚಿವಾಲಯ, ನದಿ ಅಭಿವೃದ್ಧಿ ಮತ್ತು ಗಂಗಾ ಪುನರುಜ್ಜೀವನ ಇಲಾಖೆ ಜಂಟಿ ಕಾರ್ಯದರ್ಶಿ ಸುಬೋಧ್ ಯಾದವ್ ಗುರುವಾರ ಭೇಟಿ ನೀಡಿದ್ದರು.
ಇದನ್ನೂ ಓದಿ: ಪ್ರತಿ ಮನೆಗೆ ಶುದ್ಧ ನೀರು ಪೂರೈಕೆ ಜೆಜೆಎಂ ಉದ್ದೇಶ
ಆರೋಗ್ಯ ಕೇಂದ್ರದಲ್ಲಿನ ಅವ್ಯವಸ್ಥೆ, ಸ್ವಚ್ಛತೆ ಇಲ್ಲದಿರುವುದು, ನೀರಿನ ಶುದ್ಧೀಕರಣ ಘಟಕದ ಮಾಹಿತಿ ಪಡೆದರು. ನೀರಿನ ಮಾಪನ ಕೇಂದ್ರದ ಮಾಹಿತಿ ಮತ್ತು ಆವರಣದಲ್ಲಿ ನಡೆಯುತ್ತಿರುವ ಕಾಮಗಾರಿ ಬಗ್ಗೆ ಮಾಹಿತಿ ಪಡೆದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಜೆಜೆಎಂ ಯೋಜನೆ ಅನುಷ್ಠಾನ ವಿಫಲಗೊಂಡಿರುವ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದು ಮುಂದಿನ ಕ್ರಮದ ಬಗ್ಗೆ ಅಧಿಕಾರಿಗಳಿಗೆ ಸೂಚಿಸಲಾಗುವುದು. ಆರೋಗ್ಯ ಇಲಾಖೆಯಲ್ಲಿನ ವೈದ್ಯರು ಕ್ಲಿನಿಕ್ ನಡೆಸುತ್ತಿದ್ದರೆ ಅಂಥವರ ವಿರುದ್ಧ ಕ್ರಮಕ್ಕೆ ಡಿಎಚ್‌ಒಗೆ ತಿಳಿಸಲಾಗುವುದು ಎಂದರು.
ಸುಬೋಧ್ ಯಾದವ್ ಭೇಟಿ ಹಿನ್ನೆಲೆಯಲ್ಲಿ ಅಧಿಕಾರಿಗಳು ಬೆಳಗ್ಗೆಯೇ ಆಸ್ಪತ್ರೆಗೆ ದೌಡಾಯಿಸಿದ್ದರು. ಆಸ್ಪತ್ರೆಯಲ್ಲಿ ಸ್ವಚ್ಛತೆ ಕೈಗೊಳ್ಳಲಾಗಿತ್ತು. ಬೆಡ್, ಕ್ಷ ಕಿರಣದ ಕೊಠಡಿಗಳನ್ನು ಸ್ವಚ್ಛಗೊಳಿಸಲಾಗಿತ್ತು. ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ, ಜಿಪಂ ಸಿಇಒ ರಾಹುಲ್ ತುಕಾರಾಮ್ ಪಾಂಡ್ವೆ, ಉಪ ಕಾರ್ಯದರ್ಶಿ ಶಶಿಕಾಂತ್ ಶಿವಪುರೆ, ಯೋಜನಾ ನಿರ್ದೇಶಕ ಪ್ರಕಾಶ್, ತಾಪಂ ಇಒ ಉಮೇಶ, ಇದ್ದರು.