ಮಾನ್ವಿ ಪಟ್ಟಣದ ತಾಪಂ ಸಭಾಂಗಣದಲ್ಲಿ ಆಯೋಜಿಸಿದ್ದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಜಿಪಂ ಉಪ ಕಾರ್ಯದರ್ಶಿ ಹಾಲಸಿದ್ದಪ್ಪ ಪೂಜೇರಿ ಮಾತನಾಡಿದರು. ತಾಪಂ ಇಒ ಖಾಲಿದ್ ಅಹಮ್ಮದ್ ಇದ್ದರು. 
ಜಿಲ್ಲೆ

ಜೆಜೆಎಂ ಕಾಮಗಾರಿ ಬೇಗ ಮುಗಿಸಿ ಹಸ್ತಾಂತರಿಸಿ

Kopala - Desk - Eraveni

ಮಾನ್ವಿ: ಪಟ್ಟಣ ಮತ್ತು ಗ್ರಾಮಗಳಲ್ಲಿ ಸ್ವಚ್ಛತೆಗೆ ಹೆಚ್ಚಿನ ಅದ್ಯತೆ ನೀಡಬೇಕು. ಕುಡಿವ ನೀರಿನ ಟ್ಯಾಂಕ್‌ಗಳನ್ನು ಕಾಲಕಾಲಕ್ಕೆ ತೊಳೆಯಬೇಕು. ಗ್ರಾಪಂಗೆ ಜನರು ಸಲ್ಲಿಸುವ ಅರ್ಜಿಗಳನ್ನು ಸಕಾಲದಲ್ಲಿ ವಿಲೇವಾರಿಗೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಪಂ ಉಪ ಕಾರ್ಯದರ್ಶಿ ಹಾಗೂ ಮಾನ್ವಿ ತಾಪಂ ಆಡಳಿತಾಧಿಕಾರಿ ಹಾಲಸಿದ್ದಪ್ಪ ಪೂಜೇರಿ ಸೂಚಿಸಿದರು.

ಪಟ್ಟಣದ ತಾಪಂ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ತಾಲೂಕಿನ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದರು. ಮಳೆಗಾಲ ಇರುವುದರಿಂದ ಮಲೇರಿಯಾ ಮತ್ತು ಡೆಂೆ ಪ್ರಕರಣಗಳು ಹೆಚ್ಚಾಗಿದ್ದು, ತಾಲೂಕಿನ ಎಲ್ಲ ಗ್ರಾಪಂಗಳ ವ್ಯಾಪ್ತಿ ಗ್ರಾಮಗಳಲ್ಲಿ ನೀರು ನಿಲ್ಲುವ ಗುಂಡಿಗಳನ್ನು ಮುಚ್ಚಬೇಕು. ಚರಂಡಿಗಳಲ್ಲಿ ಸರಾಗವಾಗಿ ನೀರು ಹರಿಯುವಂತೆ ನೋಡಿಕೊಳ್ಳಬೇಕು.

ಗ್ರಾಮೀಣ ಕುಡಿವ ನೀರು ಹಾಗೂ ನೆರ್ಮಲ್ಯ ಇಲಾಖೆ ಗ್ರಾಮೀಣ ಭಾಗದಲ್ಲಿ ಜೆಜೆಎಂ ಕಾಮಗಾರಿ ಪೂರ್ಣಗೊಳಿಸಿ ನೀರಿನ ಸಂಪರ್ಕ ಕಲ್ಪಿಸಿ ಗ್ರಾಪಂಗೆ ಹಸ್ತಾಂತರಿಸಬೇಕು. ಶುದ್ಧ ಕುಡಿವ ನೀರಿನ ಘಟಕಗಳನ್ನು ದುರಸ್ತಿ ಮಾಡಿಸಿ ಜನರಿಗೆ ಶುದ್ಧ ನೀರು ದೊರೆಯುವಂತೆ ಕ್ರಮಕೈಗೊಳ್ಳಬೇಕು ಎಂದು ಸೂಚನೆ ನೀಡಿದರು. ಪಟ್ಟಣದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಗರ್ಭಿಣಿಯರಿಗೆ ಉತ್ತಮ ಆರೈಕೆ ಮಾಡಬೇಕು. ಸಹಜ ಹೆರಿಗೆಗೆ ಆದ್ಯತೆ ನೀಡಬೇಕು.

ಅಪಾಯವಿದ್ದರೆ ಸಿಸೇರಿಯನ್ ಮಾಡಲು ಮುಂದಾಬೇಕು ಎಂದು ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಬಾಬು ಚಿನ್ನಗೆ ಸೂಚಿಸಿದರು. ತಾಲೂಕಿನ ಸಮಾಜ ಕಲ್ಯಾಣ ಇಲಾಖೆ ವಸತಿ ನಿಲಯಗಳಲ್ಲಿ 1600 ವಿದ್ಯಾರ್ಥಿಗಳಿದ್ದು, ಅಗತ್ಯ ಸೌಲಭ್ಯ ನೀಡಬೇಕೆಂದು ಸಮಾಜ ಕಲ್ಯಾಣಾಧಿಕಾರಿ ನಟರಾಜ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮಹಾಲಿಂಗಪ್ಪ ಇಂಗಳದಾಳ್‌ಗೆ ತಿಳಿಸಿದರು. ತಾಪಂ ಇಒ ಖಾಲಿದ್ ಅಹಮ್ಮದ್, ತಾಪಂ ಸಹಾಯಕ ನಿರ್ದೇಶಕಿ ದೀಪಾ ಇತರರಿದ್ದರು.