ಜಿಲ್ಲೆ

ಪ್ರಧಾನಿ ನರೇಂದ್ರ ಮೋದಿ ಸರ್ವಾಧಿಕಾರಿ ಧೋರಣೆ: ಜೆಎಂಎಂ ಸಂಘಟನಾ ಕಾರ್ಯದರ್ಶಿ ಉಗ್ರನರಸಿಂಹೇಗೌಡ ಅರೋಪ

ಕೆ.ಎನ್.ರಾಘವೇಂದ್ರ

ಮಂಡ್ಯ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಮ್ಮ 10 ವರ್ಷದ ಆಡಳಿತದಲ್ಲಿ ಸರ್ವಾಧಿಕಾರಿ ಧೋರಣೆ ಅನುಸರಿಸಿದ್ದಾರೆ ಎಂದು ಜನಾಂದೋಲನಗಳ ಮಹಾಮೈತ್ರಿ(ಜೆಎಂಎಂ)ಯ ಸಂಘಟನಾ ಕಾರ್ಯದರ್ಶಿ ಉಗ್ರನರಸಿಂಹೇಗೌಡ ಆರೋಪಿಸಿದರು.

ನರೇಂದ್ರ ಮೋದಿ ಪ್ರಧಾನಿಯಾದ ಮೇಲೆ ನ್ಯಾಯಾಂಗ ವ್ಯವಸ್ಥೆ ಹಳ್ಳ ಹಿಡಿದಿದೆ. ವಿರೋಧ ಪಕ್ಷಗಳನ್ನು ಸಂಪೂರ್ಣವಾಗಿ ನಾಶ ಮಾಡಲಾಗುತ್ತಿದೆ. ಮಾಧ್ಯಮಗಳನ್ನು ಹಿಡಿತಕ್ಕೆ ತೆಗೆದುಕೊಳ್ಳಲಾಗುತ್ತಿದೆ. ಇದರಿಂದ ಪ್ರಜಾಪ್ರಭುತ್ವಕ್ಕೆ ಧಕ್ಕೆ ಆಗುತ್ತಿದೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಜಾರಿ ನಿರ್ದೇಶನಾಲಯ, ತೆರಿಗೆ ಇಲಾಖೆ, ಸಿಬಿಐ ಸಂಸ್ಥೆಗಳು ಕೇಂದ್ರ ಸರ್ಕಾರದ ಕೈಗೊಂಬೆಯಾಗಿವೆ. ಸಾಂಸ್ಕೃತಿಕತೆ ಸೌಹಾರ್ದತೆಗೆ ಇಡೀ ಇಂಡಿಯಾದಲ್ಲಿಯೇ ಮಂಡ್ಯ ಮಾದರಿಯಾಗಿದೆ. ಆದ್ದರಿಂದ ಪ್ರಜಾಪ್ರಭುತ್ವ ನಾಶ ಮಾಡಲು ನಿಂತಿರುವವರನ್ನು ಚುನಾವಣೆಯಲ್ಲಿ ತಿರಸ್ಕರಿಸುವಂತೆ ಮನವಿ ಮಾಡಿದರು.

ರೈತ ಸಂಘದ ಜಿಲ್ಲಾಧ್ಯಕ್ಷ ಎ.ಎಲ್.ಕೆಂಪುಗೌಡ, ಕೆ.ವಿ.ಭಟ್, ಬಸವರಾಜು, ಅಭಿರುಚಿ ಗಣೇಶ್, ಪ್ರಕಾಶ್ ಇದ್ದರು.