ಜಿಲ್ಲೆ

ಜ್ಞಾನ ವಿಕಾಸ ಯೋಜನೆ ವಾರ್ಷಿಕೋತ್ಸವ

Mysuru - Desk - Naveen Kumar H P


ವಿಜಯವಾಣಿ ಸುದ್ದಿಜಾಲ ಅರಸೀಕೆರೆ (ಗ್ರಾಮಾಂತರ)
ತಾಲೂಕಿನ ಕಣಕಟ್ಟೆ ಹೋಬಳಿಯ ನರಸೀಪುರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಜ್ಞಾನ ವಿಕಾಸ ಯೋಜನೆಯ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಶುಕ್ರವಾರ ನರಸೀಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಬ್ಯಾಂಕ್ ಉಪಾಧ್ಯಕ್ಷ ಎಂ.ಜಿ.ರಾಮಣ್ಣ ಉದ್ಘಾಟಿಸಿದರು.
ಸಂಪನ್ಮೂಲ ವ್ಯಕ್ತಿ ರತ್ನಮ್ಮ ಅವರು ಮಾತನಾಡಿ, ಹೆಣ್ಣು ಮಕ್ಕಳು ಕೆಲವು ಕಾಯಿಲೆಗಳನ್ನು ಗೌಪ್ಯವಾಗಿ ಮುಚ್ಚಿಡುತ್ತಾರೆ. ಗರ್ಭಕೋಶ ಕ್ಯಾನ್ಸರ್, ಸ್ತನ ಕ್ಯಾನ್ಸರ್ ಕೊನೆ ಹಂತ ತಲುಪಿದಾಗ ವೈದ್ಯರ ಬಳಿ ಹೋಗುತ್ತಾರೆ. ಆ ಸಮಯದಲ್ಲಿ ಜೀವ ಉಳಿಸಿಕೊಳ್ಳುವುದು ಕಷ್ಟವಾಗುತ್ತದೆ. ಆದ್ದರಿಂದ ಮಹಿಳೆಯರು ಯಾವುದೇ ಕಾಯಿಲೆಯನ್ನು ಮುಚ್ಚಿಡಬಾರದು. ವೈದ್ಯರ ಸಲಹೆ ಪಡೆಯಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮ ಅಂಗವಾಗಿ ರಂಗೋಲಿ, ಪುಷ್ಪಗುಚ್ಛ, ಆಟೋಟ ಸ್ಪರ್ಧೆ ಏರ್ಪಡಿಸಲಾಗಿತ್ತು. ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಯಿತು.