ಮೈಸೂರು: ರಾಜ್ಯ ಯುವ ಕಾಂಗ್ರೆಸ್ ವತಿಯಿಂದ ನಗರದಲ್ಲಿ ಬುಧವಾರ ‘ಉದ್ಯೋಗ ಸೃಷ್ಟಿ ಕಾರ್ಯಕ್ರಮ’ ನೆರವೇರಿತು.
ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಾರ್ಡ್ ಸಂಖ್ಯೆ 41 (ಮಂಡಿ ಮೊಹಲ್ಲಾ) ಎಲ್ಲಮ್ಮ ತಾಯಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವ ಮೂಲಕ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಹ್ಯಾರಿಸ್ ನಲಪಾಡ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಮಂಡಿ ಮೊಹಲ್ಲಾದ ಮನೆಮನೆಗಳಿಗೆ ತೆರಳಿ ಅವಕಾಶ ವಂಚಿತ ನಿರುದ್ಯೋಗಿ ವಿದ್ಯಾವಂತರನ್ನು ಭೇಟಿ ಮಾಡುವ ಮೂಲಕ ಮಾಹಿತಿ ಪಡೆದರು.
ರಾಜ್ಯ ಯುವ ಕಾಂಗ್ರೆಸ್ ವತಿಯಿಂದ ಡಿಡಿಡಿ.್ಠಟಜಠ್ಟಜಿಠಿಜಿ.ಜ್ಞಿ ಮೂಲಕ ಸದಸ್ಯತ್ವ ಪಡೆದವರ ಪರವಾಗಿ ಮುಂದಿನ ದಿನಗಳಲ್ಲಿ ಖಾಸಗಿ ಕಂಪನಿ ಹಾಗೂ ಇತರ ಸಂಸ್ಥೆಗಳ ಮೂಲಕ ಅವರಿಗೆ ಉದ್ಯೋಗ ಸೃಷ್ಟಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ. ಅವಕಾಶ ವಂಚಿತರಿಗೆ ಸೂಕ್ತ ಅವಕಾಶ ಕಲ್ಪಿಸಲಾಗುತ್ತದೆ ಎಂದು ಅವರು ತಿಳಿಸಿದರು.
ಮಾಜಿ ಶಾಸಕ ವಾಸು ಅಧ್ಯಕ್ಷತೆ ವಹಿಸಿದ್ದರು. ಕಾಂಗ್ರೆಸ್ ನಗರಾಧ್ಯಕ್ಷ ಆರ್.ಮೂರ್ತಿ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಹ್ಯಾರಿಸ್, ನಗರ ಪಾಲಿಕೆ ಮಾಜಿ ಸದಸ್ಯರಾದ ನಾಗಭೂಷಣ್, ಪಿ.ಪ್ರಶಾಂತ್ ಗೌಡ, ಮುಖಂಡರಾದ ಪುಷ್ಪವಲ್ಲಿ, ಸುಂದರ್ ಕುಮಾರ್ ಇತರರಿದ್ದರು.