ಜಿಲ್ಲೆ

ಚೇತನ ಬಿಸಿನೆಸ್ ಸ್ಕೂಲ್​ನಲ್ಲಿ ಉದ್ಯೋಗಮೇಳ ಆ. 2ಕ್ಕೆ

ಹುಬ್ಬಳ್ಳಿ  : ಇಲ್ಲಿನ ಉಣಕಲ್​ನ ಶ್ರೀನಗರದಲ್ಲಿರುವ ಚೇತನ ಬಿಸಿನೆಸ್ ಸ್ಕೂಲ್ ಆವರಣದಲ್ಲಿ ಆ. 2ರಂದು ಬೆಳಗ್ಗೆ 9 ಗಂಟೆಯಿಂದ ಉದ್ಯೋಗ ಮೇಳ ಆಯೋಜಿಸಲಾಗಿದೆ.

ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ವಿವರ ನೀಡಿದ ಸ್ಕೂಲ್ ನಿರ್ದೇಶಕ ಡಾ. ವಿ.ಎಂ. ಕೊರವಿ, ಬಿಎ, ಬಿಕಾಂ, ಬಿಎಸ್ಸಿ, ಬಿಸಿಎ, ಬಿಬಿಎ, ಬಿಇ, ಎಂಬಿಎ, ಎಂಸಿಎ ಪದವಿಯಲ್ಲಿ ಉತ್ತೀರ್ಣರಾದ ಸ್ನಾತಕ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು ಭಾಗವಹಿಸಲು ಅರ್ಹರು ಎಂದರು.

ಬ್ಯಾಂಕ್, ಆಸ್ಪತ್ರೆಗಳು ಸೇರಿದಂತೆ ವಿವಿಧ 20ಕ್ಕೂ ಹೆಚ್ಚು ಕಂಪನಿಗಳು ಉದ್ಯೋಗಾಕಾಂಕ್ಷಿಗಳನ್ನು ನೇಮಿಸಿಕೊಳ್ಳುವುದಕ್ಕಾಗಿ ಭಾಗವಹಿಸುತ್ತಿವೆ. 1,200 ಕ್ಕೂ ಹೆಚ್ಚು ಉದ್ಯೋಗಿಗಳನ್ನು ನೇಮಿಸಿಕೊಳ್ಳಲಾಗುತ್ತಿದೆ. ಚೇತನ ಬಿಸಿನೆಸ್ ಸ್ಕೂಲ್​ನಲ್ಲಿ ಕಳೆದ 10 ವರ್ಷಗಳಿಂದ ಉದ್ಯೋಗ ಮೇಳವನ್ನು ನಿಯಮಿತವಾಗಿ ನಡೆಸಿಕೊಂಡು ಬರಲಾಗುತ್ತಿದೆ ಎಂದು ಹೇಳಿದರು.

ಉದ್ಯೋಗ ಮೇಳದ ಉದ್ಘಾಟನಾ ಸಮಾರಂಭಕ್ಕೆ ಶಾಸಕ ಮಹೇಶ ಟೆಂಗಿನಕಾಯಿ ಹಾಗೂ ಜಿಲ್ಲಾಧಿಕಾರಿ ದಿವ್ಯ ಪ್ರಭು ಅತಿಥಿಯಾಗಿದ್ದು, ಪಾಲಿಕೆ ಸದಸ್ಯ ರಾಜಣ್ಣ ಕೊರವಿ ಅಧ್ಯಕ್ಷತೆ ವಹಿಸುವರು ಎಂದರು.

ಡೀನ್ ರಮಾಕಾಂತ ಕುಲಕರ್ಣಿ ಹಾಗೂ ಪ್ಲೇಸ್​ವೆುಂಟ್ ಅಧಿಕಾರಿ ಅರುಣಕುಮಾರ ಸುದ್ದಿಗೋಷ್ಠಿಯಲ್ಲಿ ಇದ್ದರು.