ಮಂಡ್ಯ: ನಗರದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆ.9ರಂದು ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಎಚ್‌ಡಿಎಫ್‌ಸಿ, ಅತ್ಯಾತಿ ಟೆಕ್ನಾಲಜಿ ಪ್ರೈ ಲಿ, ವಿ5 ಗ್ಲೋಬಲ್ ಸರ್ವಿಸ್, ಇನ್ನೋವಾ ಸೋರ್ಸ್, ಬಂಧನ್ ಬ್ಯಾಂಕ್ ಮತ್ತು ಗೊಗೊರ್ರಾ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗೆ ನೇಮಕಾತಿ ನಡೆಯಲಿದೆ.
ಎಸ್‌ಎಸ್‌ಎಲ್ಸಿ, ಪಿಯುಸಿ, ಐಟಿಐ, ಡಿಪ್ಲಮೊ(ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್) ಹಾಗೂ ಯಾವುದೇ ಪದವಿ ಉತ್ತೀರ್ಣರಾದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ತಮ್ಮ ಸ್ವವಿವರೊಂದಿಗೆ ಅಂದು ಬೆಳಗ್ಗೆ 10.30ಕ್ಕೆ ಸಂದರ್ಶನಕ್ಕೆ ಹಾಜರಾಗಬಹುದು. ಮಾಹಿತಿಗೆ ದೂ.ಸಂ: 08232-295124 ಮತ್ತು ಮೊ.ಸಂ 9164642684, 8970646629 ಅಥವಾ 8660061488 ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.