ಜಿಲ್ಲೆ

ಉದ್ಯೋಗ ಮೇಳ 5ರಂದು

Dharwada - Vikram Nadiger

ವಿಜಯವಾಣಿ ಸುದ್ದಿಜಾಲ ಧಾರವಾಡ

ನಗರದ ಕೆಎಲ್​ಇ ಸಂಸ್ಥೆಯ ಶ್ರೀ ಮೃತ್ಯುಂಜಯ ಕಲಾ ಹಾಗೂ ವಾಣಿಜ್ಯ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಸಹಯೋಗದಲ್ಲಿ ಡಿ. 5ರಂದು ಬೃಹತ್​ ಉದ್ಯೋಗ ಮೇಳ ಆಯೋಜಿಸಲಾಗಿದೆ.

40ಕ್ಕಿಂತ ಹೆಚ್ಚು ಕಂಪನಿಗಳು ಮೇಳದಲ್ಲಿ ಭಾಗವಹಿಸಲಿದ್ದು ಎಸ್ಸೆಸ್ಸೆಲ್ಸಿ, ಪಿಯುಸಿ, ಪದವಿ, ಡಿಪ್ಲೋಮಾ, ಐಟಿಐ, ಎಂಟೆಕ್​, ಬಿಇಡಿ, ಸೇರಿ ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಭಾಗವಹಿಸಬಹುದು. ಉದ್ಯೋಗ ಆಕಾಂಕ್ಷಿಗಳು ಈ ಮೇಳದ ಸದುಪಯೋಗ ಪಡೆಯಬೇಕು. ಹೆಚ್ಚಿನ ಮಾಹಿತಿಗೆ ಕಾಲೇಜು ಸಂಪಕಿರ್ಸಬಹುದು ಎಂದು ಕಾಲೇಜಿನ ಪ್ರಾಚಾರ್ಯೆ ಡಾ. ನೀಲಕ್ಕಾ ಪಾಟೀಲ ತಿಳಿಸಿದ್ದಾರೆ.