ಜಿಲ್ಲೆ

ತಾಲೂಕು, ವಿಧಾನಸಭಾ ಕ್ಷೇತ್ರ ಮಟ್ಟದಲ್ಲಿ ಉದ್ಯೋಗ ಮೇಳ ಆಯೋಜನೆ

ವಿಜಯವಾಣಿ ಸುದ್ದಿಜಾಲ ಧಾರವಾಡ

ರಾಜ್ಯ ಸರಕಾರವು ಯುವಕರ ಉದ್ಯೋಗಕ್ಕೆ ಆದ್ಯತೆ ನೀಡಿದೆ. ನಿರುದ್ಯೋಗಿ ಯುವಕರಿಗೆ ಆರ್ಥಿಕ ಭದ್ರತೆ ಹಾಗೂ ಕೌಶಲ್ಯ ಹೆಚ್ಚಳ ಹಾಗೂ ಉದ್ಯೋಗ ಹುಡುಕಲು ಅನುಕೂಲವಾಗುವಂತೆ ಯುವನಿಽ ಗ್ಯಾರಂಟಿ ಯೋಜನೆಯ ಮೂಲಕ ಪ್ರತಿ ತಿಂಗಳು ಆರ್ಥಿಕ ಸಹಾಯ ಮಾಡಲಾಗುತ್ತಿದೆ. ಜಿಲ್ಲಾ ಮಟ್ಟದ ಉದ್ಯೋಗ ಮೇಳದ ನಂತರ ತಾಲೂಕು ಹಾಗೂ ವಿಧಾನಸಭಾ ಕ್ಷೇತ್ರ ಮಟ್ಟದಲ್ಲಿ ಬೃಹತ್ ಉದ್ಯೋಗ ಮೇಳಗಳ ಆಯೋಜನೆಗೆ ನಿರ್ಧರಿಸಲಾಗಿದೆ ಎಂದು ಶಾಸಕ ಎನ್.ಎಚ್. ಕೋನರಡ್ಡಿ ಹೇಳಿದರು.

ನಗರದ ಕೆಸಿಡಿ ಆವರಣದಲ್ಲಿ ಜಿಲ್ಲಾಡಳಿತದಿಂದ ಭಾನುವಾರ ಆಯೋಜಿಸಿದ್ದ ಉದ್ಯೋಗ ಮೇಳಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಉದ್ಯಮ ಮತ್ತು ಉದ್ಯೋಗ ಕ್ಷೇತ್ರಕ್ಕೂ ಆದ್ಯತೆ ನೀಡಿದೆ. ಉತ್ತರ ಕರ್ನಾಟಕದಲ್ಲಿ ಉದ್ಯಮಗಳ ಹೆಚ್ಚಳಕ್ಕೆ ಮುತುವರ್ಜಿ ವಹಿಸಿದೆ. ಇನ್‌ವೆಸ್ಟ್ ಕರ್ನಾಟಕ ಸಮ್ಮೇಳನದ ಮೂಲಕ ದೇಶ- ವಿದೇಶಗಳ ಕೈಗಾರಿಕೊದ್ಯಮಿಗಳನ್ನು ಉತ್ತರ ಕರ್ನಾಟಕ ವಿಶೇಷವಾಗಿ ಹುಬ್ಬಳ್ಳಿ- ಧಾರವಾಡದ ಕೈಗಾರಿಕಾ ಪ್ರದೇಶಕ್ಕೆ ಆಹ್ವಾನಿಸಲಾಗಿದೆ. ಉದ್ಯಮಗಳು ಬಂಡವಾಳ ಹೂಡಿ, ಕೈಗಾರಿಕೆಗಳನ್ನು ಆರಂಭಿಸಲು ಮುಂದೆ ಬಂದಿವೆ. ಇದರಿಂದ ನಮ್ಮ ಭಾಗದ ಯುವಕ- ಯುವತಿಯರಿಗೆ ಉದ್ಯೋಗದಲ್ಲಿ ಆದ್ಯತೆ ದೊರಕಲಿದೆ ಎಂದರು.

ಜಿಲ್ಲಾಡಳಿತದ ಮುತುವರ್ಜಿಯ ಪರಿಣಾಮ ಸುಮಾರು 7,550 ಜನ ಹೆಸರು ನೋಂದಾಯಿಸಿಕೊAಡಿದ್ದರು. 93 ಕೈಗಾರಿಕೆಗಳು, 20 ಮಾನವ ಸಂಪನ್ಮೂಲ ಸಂಸ್ಥೆಗಳು ಸುಮಾರು 12,145 ಉದ್ಯೋಗ ನೀಡಲು ಮೇಳದಲ್ಲಿ ಭಾಗಿಯಾಗಿದ್ದವು ಎಂದರು.

ಜಿಲ್ಲಾಧಿಕಾರಿ ದಿವ್ಯ ಪ್ರಭು, ಜಿಲ್ಲಾ ಪಂಚಾಯಿಸಿ ಸಿಇಒ ಭುವನೇಶ ಪಾಟೀಲ, ಉಪ ವಿಭಾಗಾಽಕಾರಿ ಶಾಲಂ ಹುಸೇನ್, ಯೋಜನಾ ನಿರ್ದೇಶಕಿ ರೇಖಾ ಡೋಳ್ಳಿನವರ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ರವೀಂದ್ರ ದ್ಯಾಬೇರ, ತಹಸೀಲ್ದಾರ್ ಡಿ.ಎಚ್. ಹೂಗಾರ, ಕ್ಷೇತ್ರ ಶಿಕ್ಷಣಾಽಕಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

ನಂತರ ಶಾಸಕರು ಹಾಗೂ ಅಽಕಾರಿಗಳು ಉದ್ಯೋಗ ಮೇಳದ ಸಂದರ್ಶನ ಸ್ಥಳಗಳಿಗೆ ಭೇಟಿ ನೀಡಿ, ಉದ್ಯಮಿಗಳ ಹಾಗೂ ಸಂದರ್ಶನಕ್ಕೆ ಬಂದಿರುವ ಯುವಕ- ಯುವತಿಯವರೊಂದಿಗೆ ಸಂವಾದ ನಡೆಸಿದರು.