ಮಂಡ್ಯ: ವಿದ್ಯಾವಂತ ಯುವಕ ಹಾಗೂ ಯುವತಿಯರಿಗೆ ಉದ್ಯೋಗಾವಕಾಶ ಒದಗಿಸುವ ನಿಟ್ಟಿನಲ್ಲಿ ಅ.27ರಂದು ನಗರದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ. 18 ರಿಂದ 45 ವರ್ಷದೊಳಗಿನವರು ಭಾಗವಹಿಸಬಹುದು. ಅಂತೆಯೇ 40ಕ್ಕೂ ಹೆಚ್ಚು ಕಂಪನಿಗಳು ಪಾಲ್ಗೊಳ್ಳಲಿವೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಉದ್ಯೋಗ ಮೇಳ ಸಂಬಂಧ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲಾಡಳಿತ ಮತ್ತು ಫಸ್ಟ್ ಸರ್ಕಲ್ ಸೊಸೈಟಿ ಬೆಂಗಳೂರು, ಕರ್ನಾಟಕ ಕೌಶಲಾಭಿವೃದ್ಧಿ ನಿಗಮ, ಜಿಲ್ಲಾ ಕೌಶಲ ಮಿಷನ್ ಹಾಗೂ ಪಿ.ಇ.ಎಸ್ ಪದವಿ ಕಾಲೇಜಿನ ಸಹಯೋಗದಲ್ಲಿ ಅಂದು ಬೆಳಗ್ಗೆ 11 ಗಂಟೆಗೆ ಪಿ.ಇ.ಎಸ್ ಪದವಿ ಕಾಲೇಜಿನಲ್ಲಿ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಅಂದು ನಡೆಯುವ ಉದ್ಯೋಗ ಮೇಳದಲ್ಲಿ ಎಸ್.ಎಸ್.ಎಲ್.ಸಿ, ಪಿಯುಸಿ, ಡಿಪ್ಲೊಮಾ, ನರ್ಸಿಂಗ್ ಅಥವಾ ಯಾವುದೇ ಪದವೀಧರರು ಭಾಗವಹಿಸಬಹುದಾಗಿದೆ. ಮಾತ್ರವಲ್ಲದೆ ತಮ್ಮ ಸ್ವವಿವರದೊಂದಿಗೆ ಶೈಕ್ಷಣಿಕ ದಾಖಲೆ, ೆಟೋ, ಆಧಾರ್ ಕಾರ್ಡ್ ಪ್ರತಿಯೊಂದಿಗೆ ಹಾಜರಾಗಬಹುದು. ಈ ಸೌಲಭ್ಯವನ್ನು ಯುವ ಸಮೂಹ ಸದ್ಬಳಕೆ ಮಾಡಿಕೊಳ್ಳುವಂತೆ ಸಲಹೆ ನೀಡಿದರು.
ಜಿಲ್ಲಾ ಪಂಚಾಯಿತಿ ಸಿಇಒ ಶೇಖ್ ತನ್ವೀರ್ ಆಸ್ಿ ಮಾತನಾಡಿ, ನಿರುದ್ಯೋಗ ಹಾಗೂ ವಿದ್ಯಾವಂತರಿಗೆ ಉದ್ಯೋಗ ಮೇಳದಲ್ಲಿ ಹೆಚ್ಚು ಅವಕಾಶ ನೀಡುವ ಸಿಗಲಿದೆ ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು, ಮಂಡ್ಯ ಎಸಿ ಶಿವಮೂರ್ತಿ, ಜಿಲ್ಲಾ ಕೌಶಲಾಭಿವೃದ್ದಿ ಅಧಿಕಾರಿ ಆರ್.ನಾಗಾನಂದ ಇತರರಿದ್ದರು.