ಜಿಲ್ಲೆ

ಜು.14ರಂದು ನೇಮಕಾತಿಗೆ ನೇರ ಸಂದರ್ಶನ: ನಗರದ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಆಯೋಜನೆ

ಕೆ.ಎನ್.ರಾಘವೇಂದ್ರ

ಮಂಡ್ಯ: ಸರ್ವೋದಯ ಸ್ಮಾಲ್ ಫೈನಾನ್ಸ್ ಬ್ಯಾಂಕ್ ವತಿಯಿಂದ ಜು.14ರಂದು ನಗರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಅಪ್ರೆಂಟಿಸ್ ನೇಮಕಾತಿಗಾಗಿ ನೇರ ಸಂದರ್ಶನ ಆಯೋಜಿಸಲಾಗಿದೆ.

ಮಂಡ್ಯ, ಮದ್ದೂರು ಹಾಗೂ ಮಳವಳ್ಳಿ ತಾಲೂಕಿನಲ್ಲಿ ಹೌಸಿಂಗ್ ಲೋನ್ ವಿಭಾಗದಲ್ಲಿ ಕಾರ್ಯನಿರ್ವಹಿಸಲು ಪಿಯುಸಿ, ಡಿಪ್ಲೊಮೋ, ಐಟಿಐ ಮತ್ತು ಯಾವುದೇ ಪದವಿ ತೇರ್ಗಡೆಯಾದಂತಹ 18 ರಿಂದ 30 ವರ್ಷದೊಳಗಿನ ಅಭ್ಯರ್ಥಿಗಳು ಅರ್ಹರಾಗಿದ್ದಾರೆ. ಆಸಕ್ತರು ನಾಲ್ಕು ಭಾವಚಿತ್ರ, ಸ್ವವಿವರದ ಪ್ರತಿ, ವಿದ್ಯಾರ್ಹತೆಯ ಅಂಕಪಟ್ಟಿ ಪ್ರತಿ, ಆಧಾರ್‌ಕಾರ್ಡ್ ಪ್ರತಿಯೊಂದಿಗೆ ಅಂದು ಬೆಳಗ್ಗೆ 10ಗಂಟೆಗೆ ಸಂದರ್ಶನದಲ್ಲಿ ಭಾಗವಹಿಸಬಹುದು. ಮಾಹಿತಿಗೆ ದೂ.ಸಂ 08232-295124 ಅಥವಾ ಮೊ.ಸಂ 8217803781 ಯನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿ ಎನ್.ಆರ್. ವೇಣುಗೋಪಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.