ಜಿಲ್ಲೆ

ಕಾವಾ ಕಾಲೇಜು: ಅತಿಥಿ ಉಪನ್ಯಾಸಕ ಹುದ್ದೆಗೆ ಅರ್ಜಿ ಆಹ್ವಾನ


ಮೈಸೂರು: ಚಾಮರಾಜೇಂದ್ರ ಸರಕಾರಿ ದೃಶ್ಯ ಕಲಾ ಕಾಲೇಜು ಕಾವ ವತಿಯಿಂದ 2022 23ನೇ ಶೈಕ್ಷಣಿಕ ಸಾಲಿಗೆ ಮಾತ್ರ ತಾತ್ಕಾಲಿಕ ಅತಿಥಿ ಉಪನ್ಯಾಸಕ ಅಥವಾ ಸಂಪನ್ಮೂಲ ವ್ಯಕ್ತಿಗಳಾಗಿ ಬೋಧನೆ ಮಾಡಲು ಇಚ್ಚಿಸುವ ಅಭ್ಯರ್ಥಿಗಳಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿಗದಿಪಡಿಸಿದ ಸಂಭಾವನೆ ಅಥವಾ ಗೌರವಧನದ ಆಧಾರದ ಮೇಲೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿಯನ್ನು ಸ್ವೀಕರಿಸಲು 2022ರ ಅಕ್ಟೋಬರ್ 13 ಕೊನೆಯ ದಿನಾಂಕವಾಗಿದ್ದು, ಸಂಜೆ 5.30 ರೊಳಗೆ ಸಲ್ಲಿಸಬೇಕು. ಅಕ್ಟೋಬರ್ 14 ರಂದು ಬೆಳಗ್ಗೆ 11 ಗಂಟೆಗೆ ಸಂಸ್ಥೆಯಲ್ಲಿ ಸಂದರ್ಶನವನ್ನು ನಡೆಸಲಾಗುವುದು. ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಸರ್ಕಾರದ ಅಂತರ್ಜಾಲ ವಿಳಾಸ www.mysore.nic.in ಮತ್ತು  www.cavamysore.karnataka.gov.in     ವೆಬ್‌ಸೈಟ್‌ನ ಮೂಲಕ ಮಾಹಿತಿಯನ್ನು ಪಡೆಯಬಹುದಾಗಿದೆ ಹೆಚ್ಚಿನ ಮಾಹಿತಿಗಾಗಿ ಕಾರ್ಯಾಲಯದ ದೂ.ಸಂ: 0821-2438931 ಅನ್ನು ಸಂಪರ್ಕಿಸಬಹುದು ಎಂದು ಕಾವಾದ ಡೀನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.