ಸುದ್ದಿಗೋಷ್ಟಿಯಲ್ಲಿ ವಿನ್ಸೆಂಟ್ ಕರಡೋಜ ಮಾತನಾಡಿದರು. 
ಜಿಲ್ಲೆ

ಉದ್ಯೋಗ ನೇಮಕಾತಿ ಜು. ೨೦ಕ್ಕೆ

ನಿತ್ಯಾನಂದ ಎಸ್.ಎನ್.

ಚಿಕ್ಕಮಗಳೂರು: ಜೋಸೆಫರ ಪ್ರಥಮ ದರ್ಜೆ ಕಾಲೇಜು ಮತ್ತು ಡೈನಮೋ ಕ್ಯಾಂಪಸ್ ಸಂಸ್ಥೆಯಿAದ ಜು. ೨೦ರಂದು ಶನಿವಾರ ಪದವೀಧರ ಯುವಜನತೆಗಾಗಿ ಉದ್ಯೋಗ ನೇಮಕಾತಿಯನ್ನು ಆಯೋಜಿಸಲಾಗಿದೆ ಎಂದು ಕಾಲೇಜಿನ ಪ್ರಾಚಾರ್ಯ ವಿನ್ಸೆಂಟ್ ಕರಡೋಜ ತಿಳಿಸಿದರು.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಈ ಸಂಬAಧ ಈಗಾಗಲೇ ಜು.೧೩, ೧೪ ರಂದು ಉದ್ಯೋಗ ತರಬೇತಿಯನ್ನು ನೀಡಲಾಗಿದೆ. ಈ ತರಬೇತಿಯಲ್ಲಿ ೬೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದು ಜು.೨೦ ರಂದು ಜ್ಯೋತಿನಗರದ ಸಂತ ಜೋಸೆಫರ ಪ್ರಥಮ ದರ್ಜೆ ಕಾಲೇಜಿನಲ್ಲಿ ಏರ್ಪಡಿಸಲಾಗಿರುವ ಉದ್ಯೋಗ ನೇಮಕಾತಿಯಲ್ಲಿ ಅಂತರಾಷ್ಟಿçÃಯ ಮಟ್ಟದ ಸುಮಾರು ೮ ವಿವಿಧ ಕಂಪನಿಗಳು ಭಾಗವಹಿಸಿ ನೇಮಕಾತಿ ಮಾಡಿಕೊಳ್ಳಲಿವೆ ಎಂದು ಮಾಹಿತಿ ನೀಡಿದರು.
ಪಿಯುಸಿ, ಡಿಪ್ಲಮೊ ಸೇರಿದಂತೆ ಯಾವುದೇ ಪದವಿ ಪೂರೈಸಿದ ಜಿಲ್ಲೆ ಹಾಗೂ ಹೊರ ಜಿಲ್ಲಾ ಕಾಲೇಜುಗಳ ವಿದ್ಯಾರ್ಥಿಗಳು ನಗರ ಮತ್ತು ಸುತ್ತಮುತ್ತಲ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವವರು ಈ ನೇರ ನೇಮಕಾತಿ ಪ್ರಕ್ರಿಯೆಯಲ್ಲಿ ಮುಕ್ತವಾಗಿ ಭಾಗವಹಿಸಬಹುದಾಗಿದೆ ಎಂದು ಹೇಳಿದರು.
ಪದವಿ ಪೂರೈಸಿ ನಿರುದ್ಯೋಗದಿಂದ ಬಳಲುತ್ತಿರುವ ಜಿಲ್ಲೆಯ ಯುವ ಜನರ ಅನುಕೂಲಕ್ಕಾಗಿ ಈ ಕಾರ್ಯಕ್ರಮ ಆಯೋಜಿಸಲಾಗಿದ್ದು, ಎಲ್ಲ ಪದವೀಧರರು ಇದರ ಸದುಪಯೋಗ ಪಡೆದುಕೊಳ್ಳಬೇಕು. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪ್ರತೀ ವರ್ಷ ಕಾಲೇಜಿನಲ್ಲಿ ಉದ್ಯೋಗ ನೇಮಕಾತಿಯನ್ನು ನಡೆಸಲಾಗುತ್ತಿದೆ. ಈಗಾಗಲೇ ಸಹಸ್ರಾರು ಯುವಜನತೆ ಇದರ ಪ್ರಯೋಜನ ಪಡೆದುಕೊಂಡಿದ್ದಾರೆ. ಉದ್ಯೋಗ ಮೇಳದ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ ೯೨೪೨೩೧೭೭೧೨ ಅಥವಾ ೯೫೯೧೧೦೯೮೨೩ ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.
ಈ ಉದ್ಯೋಗ ನೇಮಕಾತಿಯಲ್ಲಿ ಸುಮಾರು ೨೦೦ ಕ್ಕೂ ಹೆಚ್ಚು ಯುವ ಪದವೀಧರರು ಭಾಗವಹಿಸುವ ನಿರೀಕ್ಷೆ ಇದ್ದು, ಸ್ಥಳದಲ್ಲಿಯೇ ೧೦೦ ರೂ. ಗಳೊಂದಿಗೆ ನೊಂದಣಿ ಮಾಡಿಕೊಳ್ಳಬೇಕು. ಅನುಭವ ಆಧರಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ೧೮ ರಿಂದ ೨೫ ಸಾವಿರ ರೂ. ವರೆಗೆ ವೇತನ ದೊರೆಯಲಿದೆ ಎಂದು ಹೇಳಿದರು.
ಸುದ್ದಿಗೋಷ್ಟಿಯಲ್ಲಿ ಡೈನಮೋ ಕ್ಯಾಂಪಸ್ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಜನ್ಯ ಪ್ರೀತನ್, ಪ್ಲೇಸ್‌ಮೆಂಟ್ ಅಧಿಕಾರಿ ವಿನಯ್ ಕುಮಾರ್ ಉಪಸ್ಥಿತರಿದ್ದರು.