ಜಿಲ್ಲೆ

ಸ್ವಚ್ಛತಾ ಅಭಿಯಾನಕ್ಕೆ ಕೈ ಜೋಡಿಸಿ

ವೀರೇಶ ಸೌದ್ರಿ

ಶಿರಸಿ: ಮಹಿಳೆಯರು ಸುಶಿಕ್ಷಿತರಾಗಿ, ಆರ್ಥಿಕವಾಗಿ ಸದೃಢರಾದಾಗ ಆ ಕುಟುಂಬ, ಸಮಾಜದ ಉನ್ನತಿ ಸಾಧ್ಯವಾಗುತ್ತದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.

ನಗರದ ನೆಮ್ಮದಿ ರಂಗಧಾಮದಲ್ಲಿ ಸ್ಕೊಡ್‌ವೆಸ್ ಮಹಿಳಾ ಸೌಹಾರ್ದ ಸಹಕಾರಿ ಸಂಘದ ಸಾಮಾನ್ಯ ಸಭೆಯ ಅಂಗವಾಗಿ ಭಾನುವಾರ ಆಯೋಜಿಸಿದ್ದ ಮಹಿಳಾ ಸಮಾವೇಶ, ಸನ್ಮಾನ ಹಾಗೂ ಬಹುಮಾನ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಇತ್ತೀಚೆಗೆ ಮಹಿಳೆಯರು ಸಂಘಗಳ ಚಟುವಟಿಕೆಯಲ್ಲಿ ಹೆಚ್ಚೆಚ್ಚು ತೊಡಗಿದ್ದಾರೆ ಎಂದರು.

ಅಕ್ಟೋಬರ್ 2ರಂದು ಜನಾಂದೋಲನ ರೂಪದಲ್ಲಿ ಸ್ವಚ್ಛತಾ ಅಭಿಯಾನ ನಡೆಯಬೇಕು. ಇದಕ್ಕೆ ಸ್ವ ಸಹಾಯ ಸಂಘಗಳು ಕೈಜೋಡಿಸಬೇಕು ಎಂದು ಮನವಿ ಮಾಡಿದರು.

ಮಹಿಳಾ ಸೌಹಾರ್ದ ಸಹಕಾರಿ ಸಂಘದ ಬೆಳವಣಿಗೆಗೆ ಸಹಕರಿಸಿದ ಸ್ಕೊಡ್‌ವೆಸ್ ಸಂಸ್ಥೆ ಕಾರ್ಯನಿರ್ವಾಹಕ ನಿರ್ದೇಶಕ ಡಾ.ವೆಂಕಟೇಶ ನಾಯ್ಕ ಅವರನ್ನು ಸನ್ಮಾನಿಸಲಾಯಿತು. ಸಂಘದ ಅಧ್ಯಕ್ಷೆ ಸರಸ್ವತಿ ಎನ್. ರವಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ರೋಟರಿ ಕ್ಲಬ್ ಅಧ್ಯಕ್ಷ ಡಾ. ಸುಮನ್ ಹೆಗಡೆ, ನಗರಸಭೆ ಅಧ್ಯಕ್ಷೆ ಶರ್ಮಿಳಾ ಮಾದನಗೇರಿ, ಸ್ಕೊಡ್‌ವೆಸ್ ನಿರ್ದೇಶಕ ಪ್ರೊ.ಕೆ.ಎನ್. ಹೊಸ್ಮನಿ, ಹೇಮಲತಾ ಚೌಗಲೆ ಇದ್ದರು. ಸ್ವಸಹಾಯ ಸಂಘದಲ್ಲಿ ವಿಶೇಷ ಸಾಧನೆ ಮಾಡಿದ ಮಹಿಳಾ ಸದಸ್ಯೆಯರಿಗೆ, ಪಿಗ್ಮಿ ಸಂಗ್ರಹಕರಾರರು ಹಾಗೂ ಸಹಕಾರಿ ಸಿಬ್ಬಂದಿಯನ್ನು ಸನ್ಮಾನಿಸಲಾಯಿತು.