ಆಲೂರು ತಾಲೂಕು ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ತಹಸೀಲ್ದಾರ್ ಮಲ್ಲಿಕಾರ್ಜುನ್ ಉದ್ಘಾಟಿಸಿದರು. 
ಜಿಲ್ಲೆ

ಬಲಿಷ್ಠ ಭಾರತ ನಿರ್ಮಾಣಕ್ಕೆ ಕೈ ಜೋಡಿಸಿ

ಆಲೂರು: ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಜೀವನ ಮೌಲ್ಯ ಮುಂದಿನ ಪೀಳಿಗೆಗೆ ಅನುಕರಣೀಯ ಎಂದು ತಹಸೀಲ್ದಾರ್ ಮಲ್ಲಿಕಾರ್ಜುನ್ ತಿಳಿಸಿದರು.

ತಾಲೂಕು ಕಚೇರಿ ಆವರಣದಲ್ಲಿ  ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಆಯೋಜಿಸಿದ್ದ ಗಾಂಧೀಜಿ ಹಾಗೂ ಲಾಲ್ ಬಹಾದೂರ್ ಶಾಸ್ತ್ರಿ ಅವರ ಜನ್ಮ ದಿನಾಚರಣೆ ಕಾರ್ಯಕ್ರಮ ಮಾತನಾಡಿದ ಅವರು, ಗಾಂಧೀಜಿ ಅವರ ಸಂದೇಶಗಳು ಸಾರ್ವಕಾಲಿಕ. ಜತೆಗೆ ಶಾಸ್ತ್ರಿ ಅವರ ಜೀವನ ಮೌಲ್ಯ, ಸಂದೇಶಗಳನ್ನು ಎಲ್ಲರೂ ಪಾಲಿಸಿ ಸಂಸ್ಕೃತ ಬಲಿಷ್ಠ ಭಾರತ ನಿರ್ಮಾಣಕ್ಕೆ ಕೈ ಜೋಡಿಸಬೇಕು ಎಂದು ಕರೆ ನೀಡಿದರು.

ಶಿರಸ್ತೇದಾರ್‌ ಅಂಕೇಗೌಡ ಮಾತನಾಡಿ, ಅಹಿಂಸಾ ಚಳವಳಿ ಮೂಲಕ ದೇಶಕ್ಕೆ ಸ್ವಾತಂತ್ರೃ ತಂದುಕೊಟ್ಟ ಗಾಂಧೀಜಿ ಇಡೀ ಜಗತ್ತಿಗೆ ಶಾಂತಿಯ ಸಂದೇಶ ಸಾರಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ರಮೇಶ್‌ಕುಮಾರ್, ತಾಲೂಕು ಕಚೇರಿ ಸಿಬ್ಬಂದಿ ಹಾಜರಿದ್ದರು.