ಜಿಲ್ಲೆ

ಸಮ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ

ನರೇಶ್ ಕುಮಾರ್

ಹಗರಿಬೊಮ್ಮನಹಳ್ಳಿ: ಸಾಮಾಜಿಕ ಸಮಸ್ಯೆಗಳ ವಿರುದ್ಧ ಸಂಘಟನೆ ಹೋರಾಟ ಮಾಡುತ್ತ ಬಂದಿದ್ದು, ಸಮ ಸಮಾಜ ನಿರ್ಮಾಣವೇ ನಮ್ಮ ಗುರಿ ಎಂದು ಎಸ್‌ಎಫ್‌ಐ ಜಿಲ್ಲಾಧ್ಯಕ್ಷ ಬಸವರಾಜ್ ಹೇಳಿದರು.

ಪಟ್ಟಣದ ಡಾ.ಅಂಬೇಡ್ಕರ್ ಭವನದಲ್ಲಿ ಶುಕ್ರವಾರ ಏರ್ಪಡಿಸಿದ್ದ ಎಸ್‌ಎಫ್‌ಐ 6ನೇ ತಾಲೂಕು ಸಮ್ಮೇಳನ ಉದ್ಘಾಟಸಿ ಮಾತನಾಡಿದರು. ವಿದ್ಯಾರ್ಥಿಗಳು ಸೈದ್ಧಾಂತಿಕ ಆಲೋಚನೆಗಳೊಂದಿಗೆ ವೈಜ್ಞಾನಿಕ ಸಮಾಜ ಕಟ್ಟಲು ಮುಂದಾಗಬೇಕು. ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡುತ್ತಾ ಮಹಿಳೆಯರ ನೋವುಗಳಿಗೆ ಸ್ಪಂದಿಸಬೇಕು ಎಂದರು.

ಹಿರಿಯ ಸಾಹಿತಿ ಹುರುಕಡ್ಲಿ ಶಿವಕುಮಾರ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರ ಯುವಕರಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ವಿಫಲವಾಗಿವೆ. ಕಾಲೇಜು ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅರ್ಥ ಮಾಡಿಕೊಳ್ಳಬೇಕು. ಸರ್ಕಾರಿ ಹಾಸ್ಟೆಲ್‌ನಲ್ಲಿ ಪ್ರವೇಶ, ಸ್ಕಾಲರ್‌ಶಿಪ್ ಸಿಗದ ಬಗ್ಗೆ ಯುವಜನತೆ ಪ್ರಶ್ನೆ ಮಾಡಬೇಕು ಎಂದು ತಿಳಿಸಿದರು.

ತಾಲೂಕು ಅಧ್ಯಕ್ಷ ಜಯಸೂರ್ಯ ಮೇಟಿ ಕೊಟ್ರಪ್ಪ ಮಾತನಾಡಿದರು. ಜನವಾದಿ ಮಹಿಳಾ ತಾಲೂಕು ಕಾರ್ಯದರ್ಶಿ ಸರ್ದಾರ್ ಹುಲಿಗೆಮ್ಮ, ಗಣೇಶ್ ಹವಾಲ್ದಾರ್, ನಂದಿನಿ, ಹುಲಿಗೇಶ್ ಇತರರಿದ್ದರು.