ಮಸ್ಕಿಯ ಗಾಂಧಿನಗರದಲ್ಲಿ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತು ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಸಿಆರ್‌ಪಿ ರಾಮಸ್ವಾಮಿ ಉದ್ಘಾಟಿಸಿದರು. ಕಾರ್ಮಿಕ ನಿರೀಕ್ಷಕ ಶಾಂತಮೂರ್ತಿ, ಶಿಶು ಅಭಿವೃದ್ಧಿ ಯೋಜನೆ ಮೇಲ್ವಿಚಾರಕಿ ಶಿವಲೀಲಾ, ಸಿಆರ್‌ಪಿ ಭೀಮಾಶಂಕರ, ಪ್ರಮುಖರಾದ ಮೌನೇಶ, ನರಸಿಂಹ, ಹುಸೇನ ನಾಯಕ ಇತರರಿದ್ದರು. 
ಜಿಲ್ಲೆ

ಬಾಲಕಾರ್ಮಿಕ ಪದ್ಧತಿ ತಡೆಗೆ ಕೈಜೋಡಿಸಿ

ನರೇಶ್ ಕುಮಾರ್

ಮಸ್ಕಿ: ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕೈಜೋಡಿಸಬೇಕು ಎಂದು ಸಿಆರ್‌ಪಿ ರಾಮಸ್ವಾಮಿ ಹೇಳಿದರು.

ಪಟ್ಟಣದ ಗಾಂಧಿನಗರದಲ್ಲಿ ಎಸ್ಸಿಪಿ-ಟಿಎಸ್ಪಿ ಉಪಯೋಜನೆಯಡಿ ಶುಕ್ರವಾರ ಹಮ್ಮಿಕೊಂಡಿದ್ದ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತು ಕಾನೂನು ಅರಿವು ನೆರವು ಕಾರ್ಯಕ್ರಮದಲ್ಲಿ ಮಾತನಾಡಿದರು.

ಬಾಲಕಾರ್ಮಿಕ ಯೋಜನಾ ನಿರ್ದೇಶಕ ಮಂಜುನಾಥರೆಡ್ಡಿ ಮಾತನಾಡಿ, 14 ವರ್ಷದೊಳಗಿನ ಹಾಗೂ 14 ದಿಂದ 18 ವರ್ಷದ ಮಕ್ಕಳ ದುಡಿಮೆಯನ್ನು ಅಪಾಯಕಾರಿ ಎಂದು ನಿಷೇಧಿಸಲಾಗಿದೆ. ಮಕ್ಕಳನ್ನು ಕೆಲಸಕ್ಕೆ ಸೇರಿಸಿದರೆ ಪಾಲಕರು ಹಾಗೂ ಮಾಲೀಕರ ವಿರುದ್ಧ ಬಾಲಕಾರ್ಮಿಕ ನಿಯಂತ್ರಣ ಕಾಯ್ದೆ ಅನ್ವಯ ಪ್ರಕರಣ ದಾಖಲಿಸಲು ಅವಕಾಶವಿದೆ ಎಂದರು.

ಕಾರ್ಮಿಕ ನಿರೀಕ್ಷಕ ಶಾಂತಮೂರ್ತಿ, ಶಿಶು ಅಭಿವೃದ್ಧಿ ಯೋಜನೆ ಮೇಲ್ವಿಚಾರಕಿ ಶಿವಲೀಲಾ, ಸಿಆರ್‌ಪಿ ಭೀಮಾಶಂಕರ, ಪ್ರಮುಖರಾದ ಮೌನೇಶ, ನರಸಿಂಹ, ಹುಸೇನ ನಾಯಕ ಇತರರಿದ್ದರು.