ಹುಬ್ಬಳ್ಳಿ : ಕಲಘಟಗಿ ತಾಲೂಕಿನ ಉಗ್ಗಿನಕೇರಿ ಗ್ರಾಮದ ಸರರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಉಚಿತ ನೇತ್ರ ತಪಾಸಣಾ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರವನ್ನು ಆ. 22ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಹಮ್ಮಿಕೊಳ್ಳಲಾಗಿದೆ.
ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪ್ರೇರಿತ ಕ್ಷಮತಾ ಸೇವಾ ಸಂಸ್ಥೆ, ಜಿಲ್ಲಾ ಅಂಧತ್ವ ನಿವಾರಣಾ ಸಂಸ್ಥೆ, ವಿಶ್ವ ಮಧ್ವ ಮಹಾಪರಿಷತ್, ಶ್ರೀ ಗುರು ಮಹಿಪತಿರಾಜ ನೇತ್ರ ಸೇವಾಸಂಸ್ಥೆ ಹಾಗೂ ಡಾ. ಎಂ.ಎಂ ಜೋಶಿ ನೇತ್ರ ವಿಜ್ಞಾನ ಸಂಸ್ಥೆ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿರುವ ಶಿಬಿರವನ್ನು ವಿಧಾನ ಪರಿಷತ್ ಮಾಜಿ ಸದಸ್ಯ ನಾಗರಾಜ ಛಬ್ಬಿ ಉದ್ಘಾಟಿಸುವರು.
ಡಾ. ಎಂ.ಎಂ ಜೋಶಿ ಕಣ್ಣಿನ ಆಸ್ಪತ್ರೆಯ ನುರಿತ ವೈದ್ಯರ ತಂಡ ಕಣ್ಣಿನ ತಪಾಸಣೆ ನಡೆಸಿ, ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆಗೆ ಜನರನ್ನು ಆಯ್ಕೆ ಮಾಡಲಿದ್ದಾರೆ. ಆಯ್ಕೆಯಾದ ರೋಗಿಗಳಿಗೆ ಹುಬ್ಬಳ್ಳಿ ಗೋಕುಲ ರಸ್ತೆಯಲ್ಲಿರುವ ಡಾ. ಎಂ.ಎಂ ಜೋಶಿ ಆಸ್ಪತ್ರೆಯಲ್ಲಿ ಉಚಿತ ಶಸ್ತ್ರ ಚಿಕಿತ್ಸೆ ಮಾಡಲಾಗುವುದು.
ಉಗ್ಗಿಕೇರಿ ಸುತ್ತ್ತನ ಹಳ್ಳಿಗಳಾದ ಚಳಮಟ್ಟಿ, ಕಾಡನಕೊಪ್ಪ, ಹಾರೋಗೇರಿ, ಕಾಮಧೇನು, ಮಿಶ್ರಿಕೋಟಿ ಗ್ರಾಮಗಳ ಜನರು ಶಿಬಿರದ ಪ್ರಯೋಜನ ಪಡೆದುಕೊಳ್ಳಬೇಕೆಂದು ಕ್ಷಮತಾ ಸಂಚಾಲಕ ಗೋವಿಂದ ಜೋಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಿಬಿರಾರ್ಥಿಗಳ ನೋಂದಣಿ ಕಾರ್ಯ ಬೆಳಗ್ಗೆ 9 ಗಂಟೆಯಿಂದ ಆರಂಭವಾಗುವುದು. ಶಿಬಿರಕ್ಕೆ ಆಗಮಿಸಿ ಶಸ್ತ್ರ ಚಿಕಿತ್ಸೆಗೆ ಒಳಗಾಗುವವರು ಹಾಗೂ ತಪಾಸಣೆಗೊಳಪಡುವವರು ತಮ್ಮ ಆಧಾರ ಅಥವಾ ಇತರ ಗುರುತಿನ ಚೀಟಿ ತರಲು ಪ್ರಕಟಣೆಯಲ್ಲಿ ತಿಳಿಸಲಾಗಿದೆೆ.