ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ಅವರ ‘ಮನ್ ಕೀ ಬಾತ್’ ಕಾರ್ಯಕ್ರಮದ ನೇರ ಪ್ರಸಾರದ ವೀಕ್ಷಣೆಗೆ ಇಲ್ಲಿನ ಶ್ರೀನಗರದ ಚೇತನ ಬಿಜಿನೆಸ್ ಸ್ಕೂಲ್ ಆಡಿಟೊರಿಯಂನಲ್ಲಿ ಭಾನುವಾರ ವ್ಯವಸ್ಥೆ ಮಾಡಲಾಗಿತ್ತು.
ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಮೇಯರ್ ವೀಣಾ ಬರದ್ವಾಡ, ಪಾಲಿಕೆ ಸದಸ್ಯರಾದ ರಾಜಣ್ಣ ಕೊರವಿ, ಸಂತೋಷ ಚವ್ಹಾಣ, ತಿಪ್ಪಣ್ಣ ಮಜ್ಜಗಿ, ಮಹಾನಗರ ಜಿಲ್ಲಾ ಬಿಜೆಪಿ ಅಧ್ಯಕ್ಷ ಸಂಜಯ ಕಪಟಕರ, ಡಾ. ವಿಶ್ವನಾಥ ಕೊರವಿ ಇತರರು ಇದ್ದರು.
ಬೈಕ್ ರ್ಯಾಲಿ: ಚಂದ್ರಯಾನ -3 ಯಶಸ್ವಿಯಾದ ಹಿನ್ನೆಲೆಯಲ್ಲಿ ಭಾನುವಾರ ಬೈಕ್ ರ‍್ಯಾಲಿ ಆಯೋಜಿಸಲಾಗಿತ್ತು. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಬೈಕ್ ರೈಡ್ ಮಾಡುವ ಮೂಲಕ ‘ ಇಸ್ರೋ ವಿಜ್ಞಾನಿ’ಗಳಿಗೆ ಅಭಿನಂದನೆ ಸಲ್ಲಿಸಿದರು. ರ್ಯಾಲಿಯು ಚೇತನ ಬಿಜಿನೆಸ್ ಕಾಲೇಜ್ನಿಂದ ಆರಂಭವಾಗಿ ಸಾಯಿ ನಗರ ಸರ್ಕಲ್ವರೆಗೆ ನಡೆಯಿತು.