ಜಿಲ್ಲೆ

ದರ್ಶನ್ ವಿಚಾರವಾಗಿ ಸಿಎಂಗೆ ಜೋಶಿ ಪತ್ರ

ಹುಬ್ಬಳ್ಳಿ : ನಟ ದರ್ಶನ್ ವಿಚಾರವಾಗಿ ಮುಖ್ಯಮಂತ್ರಿ ಮತ್ತು ರಾಜ್ಯಪಾಲರಿಗೆ ಪತ್ರ ಬರೆಯುವುದಾಗಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.

ನಗರದಲ್ಲಿ ಸೋಮವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಟ ದರ್ಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದರು.

ಜೈಲಿನಲ್ಲಿ ಇರುವ ಕೊಲೆ ಆರೋಪಿ ದರ್ಶನ್​ಗೆ ರಾಜಾತಿಥ್ಯ ನೀಡುತ್ತಿರವ ಬಗ್ಗೆ ಖಾರವಾಗಿ ಪ್ರತಿಕ್ರಿಯಿಸಿದ ಸಚಿವರು, ದರ್ಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರಕ್ಕೆ ಗಂಭೀರತೆಯೇ ಇಲ್ಲವೆಂದು ಕಿಡಿ ಕಾರಿದರು.

ದರ್ಶನ್ ಗೆ ಜೈಲಿನಲ್ಲಿ ರಾಜಾತಿಥ್ಯ ನೀಡಿದ ಹಿನ್ನೆಲೆಯಲ್ಲಿ ಈಗ ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಿದ್ದಾರೆ. ಇಷ್ಟು ದಿನ ಸರ್ಕಾರ ಏನು ಕತ್ತೆ ಕಾಯುತ್ತಿತ್ತಾ? ಎಂದು ಪ್ರಶ್ನಿಸಿದ ಜೋಶಿ, ಇದರಲ್ಲಿ ಕೆಲವು ರಾಜಕಾರಣಿಗಳ ಹಸ್ತಕ್ಷೇಪವೂ ಇದೆ ಎಂದು ಆರೋಪಿಸಿದರು.

ದರ್ಶನ್ ಪ್ರಕರಣದಲ್ಲಿ ಸಾಕ್ಷಿ ನಾಶ ಮಾಡಲು ಯೋಜನೆ ರೂಪಿಸಿದಂತಿದೆ. ಇದನ್ನೆಲ್ಲ ನೋಡಿದರೆ ಸರ್ಕಾರವೇ ದರ್ಶನ್ ರಕ್ಷಣೆಗೆ ನಿಂತಂತಿದೆ ಎಂಬ ಶಂಕೆ ಮೂಡುತ್ತದೆ. ಸರ್ಕಾರ ಏನೋ ಸಂಚು ಮಾಡುತ್ತಿದೆ ಎಂದು ಪ್ರಲ್ಹಾದ ಜೋಶಿ ಸಂಶಯ ವ್ಯಕ್ತಪಡಿಸಿದರು.