ಜಿಲ್ಲೆ

ಆ.25ರಂದು ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ

Mangaluru - Hariprasad Rai


ಮಂಗಳೂರು :ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ. 90 ಕ್ಕೂ ಹೆಚ್ಚು ಅಂಕ ಗಳಿಸಿದ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆ.25ರಂದು ಬೆಳಗ್ಗೆ 11ಕ್ಕೆ ಪತ್ರಿಕಾ ಭವನದಲ್ಲಿ ನಡೆಯಲಿದೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಕಾರ್ಯಕ್ರಮ ಉದ್ಘಾಟಿಸುವರು . ಜಿಲ್ಲಾಧಿಕಾರಿ ಮುಲ್ಲೈಮುಗಿಲನ್ ಪ್ರತಿಭಾ ಪುರಸ್ಕಾರ ನೆರವೇರಿಸುವರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಲಿದ್ದಾರೆ. ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಖಾದರ್ ಷಾ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ. ಆರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.