ಜಿಲ್ಲೆ

ಹ್ಯಾಂಡ್‌ಬಾಲ್ ಪಂದ್ಯಾವಳಿಯಲ್ಲಿ ಜೆಎಸ್‌ಎಸ್‌ಗೆೆ 4 ಪ್ರಶಸ್ತಿ

ಮಂಜುನಾಥ ಅಂಗಡಿ

ಧಾರವಾಡ: ನಗರದ ಕರ್ನಾಟಕ ವಿಶ್ವವಿದ್ಯಾಲಯ ಅಂತರ ಮಹಾವಿದ್ಯಾಲಯಗಳ ಪುರುಷ ಹಾಗೂ ಮಹಿಳೆಯರ ಏಕವಲಯ ಹ್ಯಾಂಡ್‌ಬಾಲ್ ಪಂದ್ಯಾವಳಿಯಲ್ಲಿ ನಗರದ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆಯ ವಿದ್ಯಾರ್ಥಿಗಳು ಮಹಿಳೆಯರ ವಿಭಾಗದಲ್ಲಿ ಪ್ರಥಮ, ಪುರುಷರ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆೆ.
ಜೆ.ಎಸ್.ಎಸ್ ಬನಶಂಕರಿ ಕಲಾ, ವಾಣಿಜ್ಯ ಮತ್ತು ಎಸ್.ಕೆ. ಗುಬ್ಬಿ ವಿಜ್ಞಾನ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಪುರುಷರ ವಿಭಾಗದಲ್ಲಿ ದ್ವಿತೀಯ ಸ್ಥಾನ, ಮಹಿಳೆಯರ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.
ಸಾಧಕ ವಿದ್ಯಾರ್ಥಿಗಳನ್ನು ಜೆ.ಎಸ್.ಎಸ್. ಸಂಸ್ಥೆಯ ಕಾಯದರ್ಶಿ ಡಾ. ಅಜಿತ ಪ್ರಸಾದ್ ಅಭಿನಂದಿಸಿದರು.