ಜಿಲ್ಲೆ

ಜೆಎಸ್‌ಎಸ್ ಸುವರ್ಣ ಮಹೋತ್ಸವ: ಗಮನ ಸೆಳೆದ ಮೆರವಣಿಗೆ

ವಿಜಯವಾಣಿ ಸುದ್ದಿಜಾಲ ಧಾರವಾಡ
ಇಲ್ಲಿನ ವಿದ್ಯಾಗಿರಿಯ ಜನತಾ ಶಿಕ್ಷಣ ಸಮಿತಿಯ ನೂತನ ಆಡಳಿತ ಮಂಡಳಿಯ ಸುವರ್ಣ ಮಹೋತ್ಸವ ಸಮಾರಂಭಕ್ಕೆ ಆಗಮಿಸಿದ್ದ ಗಣ್ಯರನ್ನು ಭವ್ಯ ಮೆರವಣಿಗೆ ಮೂಲಕ ಅದ್ಧೂರಿಯಾಗಿ ಸ್ವಾಗತಿಸಲಾಯಿತು.
ಡಾ. ಡಿ.ವೀರೇಂದ್ರ ಹೆಗ್ಗಡೆ, ಹೇಮಾವತಿ ಹೆಗ್ಗಡೆ ಹಾಗೂ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಜೆಎಸ್‌ಎಸ್ ಆವರಣಕ್ಕೆ ಆಗಮಿಸುತ್ತಿದ್ದಂತೆ ಅವರಿಗೆ ಸಂಸ್ಥೆಯ ಎನ್‌ಸಿಸಿ ವಿದ್ಯಾರ್ಥಿಗಳು ಗೌರವ ವಂದನೆ ಸಲ್ಲಿಸಿದರು.
ಬಳಿಕ ಅಲಂಕೃತ ಸಾರೋಟಿನಲ್ಲಿ ಮೆರವಣಿಗೆ ಮೂಲಕ ಮುಖ್ಯ ವೇದಿಕೆಗೆ ಕರೆದೊಯ್ಯಲಾಯಿತು. ಮೆರವಣಿಗೆ ಸಾಗುವ ದಾರಿಯುದ್ದಕ್ಕೂ ಸಾಲಾಗಿ ಶಿಸ್ತಿನಿಂದ ನಿಂತಿದ್ದ ವಿದ್ಯಾರ್ಥಿಗಳು ಶ್ರೀಗಳಿಗೆ ಪುಷ್ಪ ವೃಷ್ಟಿ ನಡೆಸಿದರು. ಮೆರವಣಿಗೆಯಲ್ಲಿ ಕುಂಭ ಹೊತ್ತ ಮಹಿಳೆಯರು, ವಿವಿಧ ಕಲಾ ಪ್ರಕಾರಗಳು ಹಾಗೂ ಎನ್‌ಸಿಸಿ ವಿದ್ಯಾರ್ಥಿಗಳು ಎಲ್ಲರ ಗಮನ ಸೆಳೆದರು.