ಮೈಸೂರು: ದ್ವೀಪ ರಾಷ್ಟ್ರ ಮಾರಿಷಸ್ ಹಾಗೂ ಉತ್ತರ ಪ್ರದೇಶದ ನೋಯ್ಡದಲ್ಲಿ ಜೆಎಸ್‌ಎಸ್ ತಾಂತ್ರಿಕ ವಿಶ್ವ ವಿದ್ಯಾಲಯ ತೆರೆಯಲಾಗುವುದು ಎಂದು ಜೆಎಸ್‌ಎಸ್ ಮಹಾವಿದ್ಯಾಪೀಠದ ಕಾರ್ಯನಿರ್ವಾಹಕ ಕಾರ್ಯದರ್ಶಿ ಡಾ.ಸಿ.ಜಿ.ಬೆಟಸೂರಮಠ ಹೇಳಿದರು.
ಮಾರಿಷಸ್ ಹಾಗೂ ನೋಯ್ಡದಲ್ಲಿ ಈಗಾಗಲೇ ಜೆಎಸ್‌ಎಸ್ ತಾಂತ್ರಿಕ ಕಾಲೇಜು ಕಾರ್ಯನಿರ್ವಹಿಸುತ್ತಿದ್ದು, ತಾಂತ್ರಿಕ ವಿಶ್ವ ವಿದ್ಯಾಲಯ ಪ್ರಾರಂಭಕ್ಕೆ ಈಗಾಗಲೇ ಅನುಮತಿ ಪಡೆಯಲಾಗಿದೆ. ಅಲ್ಲದೆ, ಮಾರಿಷಸ್‌ನಲ್ಲಿ ವೈದ್ಯಕೀಯ ಕಾಲೇಜು ಪ್ರಾರಂಭಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಜಮ್ಮುವಿನಲ್ಲಿ ಫಾರ್ಮಸಿ ಕಾಲೇಜು ಸ್ಥಾಪಿಸಲಾಗಿದೆ ಎಂದರು.