ಜಿಲ್ಲೆ

ಪೌಷ್ಠಿಕ ಆಹಾರ ತಯಾರಿಕಾ ಕೇಂದ್ರಗಳಿಗೆ ನ್ಯಾಯಾಧೀಶರ ಭೇಟಿ

ವಿಜಯವಾಣಿ ಸುದ್ದಿಜಾಲ ಧಾರವಾಡ

ಜಿಲ್ಲಾ ಕಾನೂನು ಸೇವೆಗಳ ಪ್ರಾಽಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಪಿ.ಎಫ್. ದೊಡ್ಡಮನಿ ಅವರು ಅಂಗನವಾಡಿ ಕೇಂದ್ರಗಳಿಗೆ ಆಹಾರ ಪೂರೈಸುವ ಘಟಕಗಳಿಗೆ ಇತ್ತೀಚೆಗೆ ಭೇಟಿ ನೀಡಿ ಪರಿಶೀಲಿಸಿದರು.

ಲಕಮನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಎಂಎಸ್‌ಪಿಸಿ ಮತ್ತು ತಾರಿಹಾಳ ಕೈಗಾರಿಕಾ ಪ್ರದೇಶದಲ್ಲಿರುವ ಮಹಿಳಾ ಪೂರಕ ಪೌಷ್ಠಿಕ ಆಹಾರ ತಯಾರಿಕಾ ಕೇಂದ್ರಕ್ಕೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಿದರು.

ಸರ್ಕಾರದಿಂದ ಬಿಡುಗಡೆಯಾದ ಆಹಾರ ಧಾನ್ಯಗಳ ವಿವರ ಮತ್ತು ಅಂಗನವಾಡಿ ಕೇಂದ್ರಗಳಿಗೆ ಪೂರೈಸಿದ ವಿವರವನ್ನು ನೀಡಲು ಸೂಚಿಸಿದರು. ನಂತರ ಉಣಕಲ್ ಕ್ರಾಸ್‌ನಲ್ಲಿರುವ ಸರ್ಕಾರಿ ಬಾಲಕರ ಬಾಲಮಂದಿರ, ಮಂದಮತಿ ಅನುಪಾಲನಾ ಸಂಸ್ಥೆ, ಮನೋವಿಕಲ ಬಾಲಕಿಯರ ಸರ್ಕಾರಿ ಬಾಲಮಂದಿರ, ಗಂಟಿಕೇರಿ ಬಾಲಕಿಯರ ಸರ್ಕಾರಿ ಬಾಲಮಂದಿರ ಹಾಗೂ ಹುಬ್ಬಳ್ಳಿಯ ಉಪ ಕಾರಾಗೃಹ ಭೇಟಿ ನೀಡಿ ಪರಿಶೀಲಿಸಿದರು.