ಜಿಲ್ಲೆ

ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದವನಿಗೆ ನ್ಯಾಯಾಂಗ ಬಂಧನ

ಅಭಿನಯ್ ಎಚ್.ಎಂ

ಹಲಗೂರು: ಸ್ಕೂಟರ್‌ನಲ್ಲಿ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದವನನ್ನು ಹಲಗೂರು ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ಮದ್ದೂರು ತಾಲೂಕಿನ ಚಂದೂಪುರ ಕಡೆಯಿಂದ ಅಗಸನಪುರ ಗ್ರಾಮದ ಕಡೆಗೆ ಮದ್ಯ ಸಾಗಿಸಲಾಗುತ್ತಿತ್ತು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಪಿಎಸ್‌ಐ ಲೋಕೇಶ್‌ಅಗಸನಪುರ ಬಳಿ ಸ್ಕೂಟರ್ ಸೇರಿದಂತೆ ವಿವಿಧ ಬಗೆಯ 40 ಲೀಟರ್ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ.

ಬಳಿಕ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿ ನ್ಯಾಯಾಲಯದ ಆಸೇಶದಂತೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.